ಬಿಎಂಟಿಸಿ ಬಸ್ ಸ್ಕೂಟರ್‌ಗೆ ಡಿಕ್ಕಿ – ಸ್ಥಳದಲ್ಲೇ ವಿದ್ಯಾರ್ಥಿನಿ ಸಾವು

Team Newsnap
1 Min Read

ಬೆಂಗಳೂರು: ಬಿಎಂಟಿಸಿ (BMTC) ಬಸ್ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳ ಸ್ಕೂಟರ್‌ಗೆ ಡಿಕ್ಕಿ ಹೊಡೆದು ಸಾವಿಗೀಡಾದ ಘಟನೆ ಮಲ್ಲೇಶ್ವರಂನ (Malleshwaram) ಹರಿಶ್ಚಂದ್ರ ಘಾಟ್ ಬಳಿ ನಡೆದಿದೆ..

ವಿದ್ಯಾರ್ಥಿನಿ ಕುಸುಮಿತ (22) ಡಿಗ್ರಿ ವ್ಯಾಸಾಂಗ ಮಾಡುತ್ತಿದ್ದು , ಸ್ಕೂಟರ್‌ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ವೇಳೆ ಬಸ್ ಡಿಕ್ಕಿಯಾಗಿ ಆಸ್ಪತ್ರೆಗೆ ದಾಖಲಿಸಲಾಯಿತು .

ಸ್ಥಳೀಯ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಯಿಸಿದ ನಂತರ ಚಿಕಿತ್ಸೆ ಫಲಕಾರಿಯಾಗದೇ
ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ.

ಬಸ್ ವೇಗವಾಗಿ ಚಲಾಯಿಸಿದ್ದೇ ಘಟನೆಗೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.ರಾಜ್ಯದ 42 ಮಂದಿ ಕೆಎಎಸ್ ಅಧಿಕಾರಿಗಳ ವರ್ಗಾವಣೆ – ಯಾರು ಎಲ್ಲಿಗೆ ಪಟ್ಟಿ ನೋಡಿ

ಮಲ್ಲೇಶ್ವರಂ ಟ್ರಾಫಿಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೋಲೀಸರು ಘಟನೆಯಲ್ಲಿ ಯಾರ ನಿರ್ಲಕ್ಷ್ಯ ನಡೆದಿದೆ ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Share This Article
Leave a comment