ಬಿಎಂಟಿಸಿ ಸಂಚಾರ ಬಂದ್ ಹಿನ್ನಲೆ ಪರಿಹಾರ ಕೇಳಿ ತುಮಕೂರು ಮೂಲದ ಪಾವನ ಎಂಬ ವಿದ್ಯಾರ್ಥಿನಿ ಲೀಗಲ್ ನೋಟಿಸ್ ಕೊಟ್ಟಿದ್ದಾಳೆ.
10 ಲಕ್ಷ ರು ಪರಿಹಾರ ಕೇಳಿ ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮತ್ತು ಬಿಎಂಟಿಸಿ ಎಂಡಿಗೆ ವಿದ್ಯಾರ್ಥಿನಿ ಪಾವನ, ವಕೀಲ ರಮೇಶ್ ನಾಯಕ್ ಮೂಲಕ ಲೀಗಲ್ ನೋಟಿಸ್ ಜಾರಿ ಮಾಡಿದ್ದಾಳೆ.
ಪಾವನ, ಕೆಂಗೇರಿ ಜೆಎಸ್ಎಸ್ ಅಕಾಡೆಮಿ ಆಫ್ ಟೆಕ್ನಿಕಲ್ ಎಜುಕೇಷನ್ ಕಾಲೇಜಿನ ಬಿಇ ಮೊದಲ ಸೆಮಿಸ್ಟರ್ನಲ್ಲಿ ಓದುತ್ತಿದ್ದಾಳೆ.
ಇಂದಿಗೆ ಸಾರಿಗೆ ನೌಕರರ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದೆ. ಬಸ್ ಸಂಚಾರ ಬಂದ್ ಆಗಿದೆ, ಪಾಸ್ ಹೊಂದಿದ್ದರೂ ಯಾವುದೇ ಪ್ರಯೋಜನವಿಲ್ಲ. ನಾವು ಬಿಎಂಟಿಸಿ ವಾರ್ಷಿಕ ಬಸ್ ಪಾಸ್ ಖರೀದಿಸಿದ್ದೇನೆ. ಪಾಸ್ ಇದ್ದರೂ ಬಸ್ ಸೇವೆ ಇಲ್ಲದೇ ಹೆಚ್ಚುವರಿ ಹಣ ಪಾವತಿಸಿ ಓಡಾಡುವಂತಾಗಿದೆ. ಪಾಸ್ ಹೊಂದಿರುವರಿಗೆ ಬಸ್ ಸೌಲಭ್ಯ ಒದಗಿಸದಿರೋದು ಸೇವಾ ನ್ಯೂನ್ಯತೆ ಹಾಗೂ ಅನುಚಿತ ವ್ಯಾಪಾರ ಪದ್ದತಿಯಾಗಿದೆ. ಈ ಕಾರಣಕ್ಕಾಗಿ ಹತ್ತು ಲಕ್ಷ ರು ಪರಿಹಾರ ಕೊಡುವಂತೆ ಲೀಗಲ್ ನೋಟಿಸ್ನಲ್ಲಿ ಆಗ್ರಹಿಸಿದ್ದಾಳೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ