ನಿಗಮ-ಮಂಡಳಿ, ಪ್ರಾಧಿಕಾರದ ಅಧ್ಯಕ್ಷ-ಉಪಾಧ್ಯಕ್ಷರ ನೇಮಕ ರದ್ದು

Team Newsnap
1 Min Read

ರಾಜ್ಯದ ವಿವಿಧ ನಿಗಮ-ಮಂಡಳಿಗೆ, ಪ್ರಾಧಿಕಾರಗಳಿಗೆ ಅಧ್ಯಕ್ಷ-ಉಪಾಧ್ಯಕ್ಷರನ್ನು ಈ ಹಿಂದೆ ನೇಮಕಾತಿಯನ್ನು ಈ ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ನಾಮನಿರ್ದೇಶನ ರದ್ದುಗೊಳಿಸಿ ಆದೇಶಿಸಿದೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಆಪ್ತ ಕಾರ್ಯದರ್ಶಿ ಟಿಪ್ಪಣಿಯಲ್ಲಿ ಮಾಹಿತಿ ನೀಡಿಲಾಗಿದೆ.

ಮುಖ್ಯಮಂತ್ರಿಗಳ ಆದೇಶದ ಮೇರೆಗೆ , ರಾಜ್ಯ ಮಟ್ಟದ ನಿಗಮ-ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರ, ಉಪಾಧ್ಯಕ್ಷರುಗಳ ನಾಮನಿರ್ದೇಶನವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದು ಪಡಿಸಿ, ಆಯಾ ಇಲಾಖೆಗಳ ವ್ಯಾಪ್ತಿಗೊಳಪಟ್ಟಂತೆ ಸರ್ಕಾರದ ಆದೇಶವನ್ನು ಇಂದೇ ಹೊರಡಿಸುವಂತೆ ಆದೇಶಿಸಿದ್ದಾರೆ.

ನಿಗಮ ಮಂಡಳಿಗಳಲ್ಲಿ ಕೆಲವರಿಗೆ ಕೊಕ್ :

ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದಿಂದ ಹಲವರನ್ನ ಕೆಳಗೆ ಇಳಿಸಿ ಕೋಕ್ ನೀಡಲಾಗಿದೆ.

ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸ್ಥಾನದಿಂದ ಸುನೀಲ್ ಪುರಾಣಿಕ್ ಅವರನ್ನು ಕೈಬಿಡಲಾಗಿದೆ.

ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರದಿಂದ ಕೆ.ರತ್ನಪ್ರಭಾ ಅವನ್ನೂ ಕೈಬಿಡಲಾಗಿದೆ. ಜೊತೆಗೆ ಕರ್ನಾಟಕದ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಸ್ಥಾನದಂದ ನಟಿ ಹಾಗೂ ಬಿಜೆಪಿ ನಾಯಕಿ ಶ್ರುತಿ ಅವರಿಗೂ ಕೋಕ್ ನೀಡಲಾಗಿದೆ.

ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮಿಳಾ ನಾಯ್ಡುರನ್ನೂ ಕೈಬಿಡಲಾಗಿದೆ. ಒಟ್ಟು ನಿಗಮ ಮಂಡಳಿಯ 48 ಅಧ್ಯಕ್ಷರಿಗೆ ಹಾಗೂ 6 ಉಪಾಧ್ಯಕ್ಷರಿಗೆ ರಾಜ್ಯ ಸರ್ಕಾರ ಕೊಕ್ ನೀಡಿದೆ.

nama
nama 1
nama2
nama3
nama4
Share This Article
Leave a comment