ಈ ಹಿನ್ನೆಲೆ ಡ್ಯಾಂನಿಂದ 11,633 ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದ್ದು, ಇದರಿಂದ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮದ ನಡುಗಡ್ಡೆಗಳು ಮುಳುಗಡೆಯ ಅಂಚಿಗೆ ಬಂದಿವೆ.ಇದನ್ನು ಓದಿ –ಸಚಿವ ಗೋಪಾಲಯ್ಯ ಹೆಸರು ಬಳಸಿ ಐಎಎಸ್ ಅಧಿಕಾರಿಗೆ ಬೆದರಿಕೆ ಕರೆ: ಆರೋಪಿ ಬಂಧನ
ನಡುಗಡ್ಡೆಗಳು ಮುಳುಗಡೆಯ ಅಂಚಿಗೆ ಬಂದಿರುವ ಕಾರಣ ರಂಗನತಿಟ್ಟು ಪಕ್ಷಿಧಾಮದಲ್ಲಿ ಭಾನುವಾರದಿಂದ ಪ್ರವಾಸಿಗರಿಗೆ ಬೋಟಿಂಗ್ ನ್ನು ರದ್ದು ಮಾಡಲಾಗಿದೆ. ಜ್ಯೋತಿಷ್ಯ ಹೇಳುವ ನೆಪದಲ್ಲಿ ಜ್ಯೋತಿಷಿ ಮನೆಗೆ ನುಗ್ಗಿದ ಕಳ್ಳರು : 5 ಲಕ್ಷ ರು, 400 ಗ್ರಾಂ ಚಿನ್ನ ದೋಚಿ ಪರಾರಿ
ಕಳೆದ 2 ವರ್ಷಗಳ ಹಿಂದೆ ಕೆಆರ್‌ಎಸ್ ಡ್ಯಾಂನಿಂದ 1 ಲಕ್ಷ ಕ್ಯೂಸೆಕ್ ನೀರನ್ನು ಹರಿಬಿಟ್ಟಿದ್ದ ಪರಿಣಾಮ ರಂಗನತಿಟ್ಟು ಪಕ್ಷಿಧಾಮದ ಬಹುತೇಕ ನಡುಗಡ್ಡೆಗಳು ನಾಶವಾಗಿದ್ದವು.
ಇದರಿಂದ ಅಲ್ಲಿದ್ದ ಪಕ್ಷಿ ಸಂಕುಲ ಸಾಕಷ್ಟು ಸಮಸ್ಯೆಗಳನ್ನು ಎದುರಿಸಿದ್ದವು. ಇದೀಗ ಕಾವೇರಿ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾದರೆ, ಕೆಆರ್‌ಎಸ್ ಡ್ಯಾಂನಿಂದ ಅಪಾರ ಪ್ರಮಾಣದಲ್ಲಿ ನದಿಗೆ ನೀರು ಬಿಡುಗಡೆ ಮಾಡಲಾಗುತ್ತದೆ. ಇದರಿಂದ ರಂಗನತಿಟ್ಟು ಮುಳುಗಡೆಯಾಗುವ ಸಾಧ್ಯತೆ ಇದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು