July 7, 2022

Newsnap Kannada

The World at your finger tips!

chemical,blast,blast

Boiler blast at Chemical Factory - 9 deaths, 20 injured

ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ – 9 ಸಾವು, 20 ಮಂದಿಗೆ ಗಾಯ

Spread the love

ರಾಸಾಯನಿಕ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು 9 ಮಂದಿ ಸಾವನ್ನಪ್ಪಿದ್ದಾರೆ , 20 ಜನರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಜರುಗಿದೆ

ದೆಹಲಿಯಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಧಾವಿಸಿ, ರಕ್ಷಣಾ ಕಾರ್ಯಾಚರಣೆ ನಡೆಸಿದರು.

ಇದನ್ನು ಓದಿ: PUC ಪಠ್ಯ ಪರಿಷ್ಕರಣೆಗೂ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ನೇಮಕ

ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ ಘಟನೆಯ ಕುರಿತು ತನಿಖೆ ಮಾಡುತ್ತಿದ್ದೇವೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹಾಪುರ್ ಇನ್‌ಸ್ಪೆಕ್ಟರ್ ಜನರಲ್ ಪ್ರವೀಣ್ ಕುಮಾರ್ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ದುರಂತದ ಕುರಿತು ಸಂತಾಪ ಸೂಚಿಸಿದ್ದು, ರಾಜ್ಯ ಸರ್ಕಾರವು ಗಾಯಾಳುಗಳ ಚಿಕಿತ್ಸೆಗೆ ತ್ವರಿತವಾಗಿ ತೊಡಗಿಸಿಕೊಂಡಿದೆ. ಉತ್ತರ ಪ್ರದೇಶದ ಹಾಪುರದ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ನಡೆದ ಘಟನೆ ಹೃದಯವಿದ್ರಾವಕವಾಗಿದೆ. ಇದರಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನನ್ನ ಸಂತಾಪವನ್ನು ತಿಳಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

error: Content is protected !!