October 23, 2021

Newsnap Kannada

The World at your finger tips!

ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ: ಇಬ್ಬರಿಗೆ ಗಾಯ – ಒಬ್ಬ ಚಿಂತಾಜನಕ

Spread the love

ಬೆಂಗಳೂರಿನಲ್ಲಿ ಶುಕ್ರವಾರ ಮತ್ತೊಂದು ಅಗ್ನಿ ದುರಂತ ಸಂಭವಿಸಿದೆ.

ದಿನದಿಂದ ದಿನಕ್ಕೆ ಅಗ್ನಿ ದುರಂತಗಳು ಹೆಚ್ಚಾಗುತ್ತಿರುವುದು, ಆತಂಕಕ್ಕೆ ಕಾರಣವಾಗಿದೆ. ಇದೀಗ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಂಗಳೂರಿನ ಅತ್ತಿಬೆಲೆಯ ಕೈಗಾರಿಕಾ ಪ್ರದೇಶದಲ್ಲಿರುವ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡಿದೆ.

ಈ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರಲ್ಲಿ ಓರ್ವನ ಸ್ಥಿತಿ ಚಿಂತಾಜನಕವಾಗಿದೆ.

ಫ್ಯಾಕ್ಟರಿ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಕೆಮಿಕಲ್ ಘಾಟು ತುಂಬಿಕೊಂಡಿದೆ. ದಟ್ಟ ಹೊಗೆ ಆವರಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿದೆ. ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಆದರೆ ಕೆಮಿಕಲ್ ಘಾಟಿನಿಂದ ಕಾರ್ಯಾಚರಣೆಗೆ ಅಡ್ಡಿಯುಂಟಾಗುತ್ತಿದೆ ಎನ್ನಲಾಗಿದೆ.

error: Content is protected !!