January 29, 2026

Newsnap Kannada

The World at your finger tips!

bihir

ಬಿಹಾರ್ : ನೂಡಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ- 6 ಮಂದಿ ಸಾವು

Spread the love

ನೂಡಲ್ಸ್ ತಯಾರಿಕಾ ಕಾರ್ಖಾನೆಯ ಬಾಯ್ಲರ್
ಸ್ಫೋಟಗೊಂಡು
6 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಶನಿವಾರ ರಾತ್ರಿ 10 ಗಂಟೆಗೆ ಸುಮಾರಿಗೆ ಬಿಹಾರದ ಮುಜಾಫರ್‍ಪುರ ಜಿಲ್ಲೆಯ ನೂಡಲ್ಸ್ ತಯಾರಿಕಾ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡಿದೆ.

ಸ್ಫೋಟದ ಸದ್ದು ಸುಮಾರು 5 ಕಿ.ಮೀ ಸುತ್ತಲಿನ ಪ್ರದೇಶಕ್ಕೆ ಕೇಳಿಸಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಕಾರ್ಯಾಚರಣೆ ಮಾಡಿದರು

ರಕ್ಷಣಾ ಕಾರ್ಯಾಚರಣೆಯು ಮುಂದುವರಿದಿದ್ದು, ಕಾರ್ಖಾನೆಯ ಅವಶೇಷಗಳ ಅಡಿಯಲ್ಲಿ 10ಕ್ಕೂ ಹೆಚ್ಚು ಜನರು ಸಿಲುಕಿರುವುದಾಗಿ ವರದಿಯಾಗಿದೆ.

ಸ್ಫೋಟದ ತೀವ್ರತೆಗೆ ಸಮೀಪದ ಮತ್ತೊಂದು ಘಟಕಕ್ಕೂ ಹಾನಿಯಾಗಿದ್ದು, ಅದರಲ್ಲಿ ಮಲಗಿದ್ದ ಇಬ್ಬರು ಕಾರ್ಮಿಕರಿಗೂ ಗಾಯಗಳಾಗಿವೆ.
ಪೊಲೀಸರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.

ಮುಜಾಫರ್‍ಪುರದ ಪೊಲೀಸ್ ಎಸ್‌ಪಿ ಜಯಂತ್ ಕಾಂತ್ ಘಟನೆಯ ಬಗ್ಗೆ ಮಾತನಾಡಿ,
ಈವರೆಗೂ ಆರು ಮೃತ ದೇಹಗಳನ್ನು ಹೊರ ತೆಗೆದಿದ್ದೇವೆ. ಐವರು ಕಾರ್ಮಿಕರು ಗಾಯಗೊಂಡಿದ್ದು, ಶ್ರೀ ಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮಾಡಲಾಗುತ್ತಿದೆ ಎಂದರು

error: Content is protected !!