ಕಳೆದ ರಾತ್ರಿ ಉತ್ತರಪ್ರದೇಶದಲ್ಲಿ ಭೀಕರ ಅಪಘಾತ ಸಂಭವಿಸಿದ್ದು 14 ಜನರು ಮೃತಪಟ್ಟಿದ್ದಾರೆ. ನಿನ್ನೆ ರಾತ್ರಿ 11.45 ರ ಸುಮಾರಿಗೆ ಮಾಣಿಕ್ ಪುರ್ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಪ್ರಯಾಣಿಕರು ತುಂಬಿಕೊಂಡಿದ್ದ ವಾಹನ ಟ್ರಕ್‌ಗೆ ಡಿಕ್ಕಿಯಾಗಿದೆ. ಪ್ರಯಾಗ್ ರಾಜ್-ಲಕ್ನೋ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಸ್‌ಯುವಿ ಒಂದು ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಇದರಿಂದ ಎಸ್‌ಯುವಿದಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ.
ಗುರುವಾರ ರಾತ್ರಿ 11.45ರ ಸುಮಾರಿಗೆ ಮಾಣಿಕಪುರ ಪೊಲೀಸ್ ಠಾಣೆ ವ್ಯಾಪ್ತಿಯ ದೇಶರಾಜ್ ಇನಾರಾ ಗ್ರಾಮದ ಸಮೀಪ ಮಹೀಂದ್ರಾ ಬೊಲೆರೊ ವಾಹನ ಮತ್ತು ನಿಲ್ಲಿಸಿದ್ದ ಟ್ರಕ್ ನಡುವೆ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಬೊಲೆರೊದ ಮುಂಭಾಗದಲ್ಲಿದ್ದ ಪ್ರಯಾಣಿಕರು ಹಿಂಬದಿಯಿಂದ ಹೊರಗೆ ಬಿದ್ದಿದ್ದಾರೆ.
ಟೈರ್ ಪಂಕ್ಚರ್ ಆಗಿದ್ದ ಕಾರಣ ದಾರಿಯ ಬದಿಯಲ್ಲಿ ಟ್ರಕ್ ಅನ್ನು ನಿಲ್ಲಿಸಲಾಗಿತ್ತು. ವೇಗವಾಗಿ ಬಂದ ಬೊಲೆರೊ ವಾಹನ ನಿಲ್ಲಿದ್ದ ಟ್ರಕ್‌ಗೆ ಹಿಂದಿನಿಂದ ಗುದ್ದಿದೆ. ವಾಹನದ ಅರ್ಧದಷ್ಟು ಭಾಗ ಟ್ರಕ್ ಅಡಿ ಸಿಲುಕಿ ನಜ್ಜುಗುಜ್ಜಾಗಿದೆ. ಬಳಿಕ ಅದನ್ನು ಪೊಲೀಸರು ಹೊರಗೆ ತೆಗೆದಿದ್ದಾರೆ ಎಂದು ಪ್ರತಾಪಗಡ ಎಸ್‌ಪಿ ಅನುರಾಗ್ ಆರ್ಯ ತಿಳಿಸಿದ್ದಾರೆ.
ಮದುವೆ ಸಮಾರಂಭವೊಂದಲ್ಲಿ ಪಾಲ್ಗೊಂಡಿದ್ದ ದುರ್ದೈವಿಗಳು ಗೊಂಡಾದಲ್ಲಿನ ತಮ್ಮ ಹಳ್ಳಿಗೆ ವಾಪಸಾಗುತ್ತಿದ್ದರು.
- ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
- ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
- ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ
- ಬ್ಯಾಂಕ್ ಆಫ್ ಬರೋಡಾ: 1267 ಹುದ್ದೆಗಳಿಗೆ ಅರ್ಜಿ ಆಹ್ವಾನ
- ಏಕಾದಶಿ ಉಪವಾಸದ ಬಗ್ಗೆ ವೈಜ್ಞಾನಿಕ ಚಿಂತನೆ ಏನು ಹೇಳುತ್ತದೆ?
More Stories
ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ
ಅಮಿತ್ ಶಾ ಹೇಳಿಕೆ ವಿರೋಧಿಸಿ ಮೈಸೂರು-ಮಂಡ್ಯ ಬಂದ್: ವಾಹನ ಸಂಚಾರಕ್ಕೆ ಅಡಚಣೆ
ಕಾನ್ಸ್ಟೇಬಲ್ ನೇಮಕಾತಿ ದೈಹಿಕ ಪರೀಕ್ಷೆ: ಓಟದ ವೇಳೆ ಬಿದ್ದ ಯುವಕನ ದುರ್ಮರಣ