ಖ್ಯಾತ ಬಾಲಿವುಡ್ ನಟ ಶ್ರೇಯಸ್ ತಲ್ಪಾಡೆಗೆ (Shreyas Talpade) ಹೃದಯಾಘಾತವಾಗಿದೆ (Heart Attack). ಶೂಟಿಂಗ್ ಸಮಯದಲ್ಲಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಆರೋಗ್ಯ ತಪಾಸಣೆಗೆ ಒಳಗಾಗಿದ್ದಾರೆ. ಲಘು ಹೃದಯಾಘಾತವಾಗಿ ಅವರನ್ನು ಮುಂಬೈನ ಅಂಧೇರಿ ಬೆಲ್ಲೆವ್ಯೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವೈದ್ಯರು ನಿನ್ನೆ ರಾತ್ರಿ 10 ಗಂಟಗೆ ಆಂಜಿಯೋಪ್ಲಾಸ್ಟಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನಡೆದಿದೆ ಮತ್ತು ಆರೋಗ್ಯ ಸ್ಥಿರವಾಗಿ ದೆ ಎಂದು ವೈದ್ಯರು ತಿಳಿಸಿದ್ದಾರೆ.
ಶ್ರೇಯಸ್ ವೆಲ್ ಕಲ್ ಟು ಜಂಗಲ್ ಸಿನಿಮಾದ ಶೂಟಿಂಗ್ ಸಮಯದಲ್ಲಿ ಕುಸಿದು ಬಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದ ಸಂದರ್ಭದಲ್ಲಿ ಲಘು ಹೃದಯಾಘಾತವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
ಆಂಜಿಯೋಪ್ಲಾಸ್ಟಿ ನಡೆಸಿದ ನಂತರ ಅವರ ಆರೋಗ್ಯ ಸ್ಥಿರವಾಗಿದೆ ಮತ್ತು ಕೆಲವೇ ದಿನಗಳಲ್ಲೇ ನಟ ಮನೆಗೆ ವಾಪಸ್ಸಾಗಲಿದ್ದಾರೆ .
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ