January 4, 2025

Newsnap Kannada

The World at your finger tips!

deepika

Bollywood actress Deepika Padukone struggles with health: hospitalization

ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ಏರುಪೇರು : ಆಸ್ಪತ್ರೆಗೆ ದಾಖಲು

Spread the love

ಬಾಲಿವುಡ್ ನಟಿ, ಕನ್ನಡತಿ ದೀಪಿಕಾ ಪಡುಕೋಣೆ ಆರೋಗ್ಯದಲ್ಲಿ ಏರುಪೇರಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ . ದೀಪಿಕಾ ಚೇತರಿಸಿಕೊಳ್ಳುತ್ತಿದ್ದಾರೆ.

WhatsApp Image 2022 06 14 at 7.32.51 PM
deepika

ಹೈದರಾಬಾದ್‌ನಲ್ಲಿ ಬಿಗ್ ಬಿ ಮತ್ತು ಪ್ರಭಾಸ್ ನಟನೆಯ `ಪ್ರಾಜೆಕ್ಟ್ ಕೆ’ ಚಿತ್ರೀಕರಣದ ವೇಳೆ ಈ ಘಟನೆ ನಡೆದಿದೆ.

ಇದನ್ನು ಓದಿ – ಕರ್ನಾಟಕ ನೂತನ ಲೋಕಾಯುಕ್ತರಾಗಿ ನಿವೃತ್ತ ನ್ಯಾ. ಬಿ.ಎಸ್​.ಪಾಟೀಲ್​ ನೇಮಕ

`ಶೂಟಿಂಗ್ ವೇಳೆ ಹೃದಯ ಬಡಿತ ಹೆಚ್ಚಳವಾದ ಕಾರಣ ಹೈದರಾಬಾದ್‌ನ ಕಾಮಿನೇನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ನಂತರ ಚೇತರಿಸಿಕೊಂಡ ದೀಪಿಕಾ ಅವರು ಆರೋಗ್ಯದಲ್ಲಿ ಯಾವುದೇ ತೊಂದರೆ ಇಲ್ಲದೇ ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದಾರೆ ಎಂದು ಚಿತ್ರತಂಡದ ಮೂಲಗಳು ತಿಳಿಸಿವೆ.

ಆಸ್ಪತ್ರೆಯಿಂದ ಚಿಕಿತ್ಸೆ ಪಡೆದ ನಂತರ ಶೂಟಿಂಗ್ ನಲ್ಲಿ ನಿರತರಾಗಿದ್ದಾರೆ. ಒತ್ತಡದಿಂದ ಕೊಂಚ ಹೃದಯ ಬಡಿತ ಹೆಚ್ಚಾಗಿ, ಸುಸ್ತಾಗಿತ್ತು ಎಂದು ಹೇಳಿದ್ದಾರೆ. ಈ ಚಿತ್ರದಲ್ಲಿ ಅಮಿತಾಬ್ ಬಚ್ಚನ್, ಪ್ರಭಾಸ್ ಅಭಿನಯಿಸುತ್ತಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!