January 10, 2025

Newsnap Kannada

The World at your finger tips!

blast

ಪಂಜಾಬ್‍ನ ಲೂಧಿಯಾನ ನ್ಯಾಯಾಲಯದಲ್ಲಿ ಸ್ಫೋಟ – ಇಬ್ಬರ ಸಾವು, 4 ಮಂದಿಗೆ ಗಾಯ

Spread the love

ಪಂಜಾಬ್‍ನ ಲೂಧಿಯಾನದಲ್ಲಿ ನ್ಯಾಯಾಲಯದ ಆವರಣದಲ್ಲಿ ಸಂಭವಿಸಿದ ಸ್ಫೋಟದಿಂದಾಗಿ, ಇಬ್ಬರು ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಈ ಮಧ್ಯಾಹ್ನ ಜರುಗಿದೆ .

ನ್ಯಾಯಾಲಯ ಕಟ್ಟಡದ ಎರಡನೇ ಮಹಡಿಯಲ್ಲಿರುವ ಬಾತ್‍ರೂಮ್‍ನಲ್ಲಿ ಮಧ್ಯಾಹ್ನ 12:22ರ ಸುಮಾರಿಗೆ ಸ್ಫೋಟ ಸಂಭವಿಸಿದೆ

ಸ್ಫೋಟದ ತೀವ್ರತೆಗೆ ಬಾತ್‍ರೂಮ್ ಗೋಡೆಗಳಿಗೆ ಹಾನಿಯಾಗಿದೆ ಮತ್ತು ಸಮೀಪದ ಕೋಣೆಗಳ ಕಿಟಕಿ ಗಾಜುಗಳು ಒಡೆದುಹೋಗಿವೆ.
ಇದೀಗ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಜಿಲ್ಲಾ ನ್ಯಾಯಾಲಯ ಲುಧಿಯಾನ ನಗರದ ಹೃದಯಭಾಗದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಯ ಸಮೀಪದಲ್ಲಿದೆ.

Copyright © All rights reserved Newsnap | Newsever by AF themes.
error: Content is protected !!