September 29, 2022

Newsnap Kannada

The World at your finger tips!

school,bomb,student

Bomb threat to DKshi school: Student mailed to postpone the exam ಡಿಕೆಶಿ ಶಾಲೆಗೆ ಬಾಂಬ್ ಬೆದರಿಕೆ: ಪರೀಕ್ಷೆ ಮುಂದೂಡಲು ವಿದ್ಯಾರ್ಥಿಯೇ ಮೇಲ್ ಮಾಡಿದ್ದ #Thenewsnap #Latestnews #bengaluru #Bomb_Threat #DKS #School #india #mandya_news #mysuru

ಡಿಕೆಶಿ ಶಾಲೆಗೆ ಬಾಂಬ್ ಬೆದರಿಕೆ: ಪರೀಕ್ಷೆ ಮುಂದೂಡಲು ವಿದ್ಯಾರ್ಥಿಯೇ ಮೇಲ್ ಮಾಡಿದ್ದ

Spread the love

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಡೆತನದ ನ್ಯಾಷನಲ್ ಹಿಲ್ ವ್ಯೂವ್ ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದು ಓರ್ವ ವಿದ್ಯಾರ್ಥಿ. 10 ನೇ ತರಗತಿ ಪರೀಕ್ಷೆ ಮುಂದೂಡುವ ಸಲುವಾಗಿ ಇಂತಹ ಬೆದರಿಕೆ ಹಾಕಿದ್ದಾನೆ ಎಂದು ತನಿಖೆಯಿಂದ ಗೊತ್ತಾಗಿದೆ

ನ್ಯಾಷನಲ್ ಹಿಲ್ ವ್ಯೂವ್ ಶಾಲೆಗೆ ಬಾಂಬ್ ಬೆದರಿಕೆಯೊಡ್ಡಿದ್ದ10ನೇ ತರಗತಿ ವಿದ್ಯಾರ್ಥಿ. ಅದು ಕೂಡ ನಟ ಹುಚ್ಚ ವೆಂಕಟ್ ಹೆಸರಲ್ಲಿ ಇಮೇಲ್ ಮಾಡಿ ಈ ಕೃತ್ಯವೆಸಗಿದ್ದಾನೆ.ಇದನ್ನು ಓದಿ –ನವ್ಯಶ್ರೀ ಹನಿಟ್ರ್ಯಾಪ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಆಡಿಯೋ ರಿಲೀಸ್ ಮಾಡಿದ ನವ್ಯ

ಜುಲೈ 21ರಿಂದ 10ನೇ ತರಗತಿ ಪರೀಕ್ಷೆ ನಡೆಸಲು ಶಾಲೆಯಲ್ಲಿ ಉದ್ದೇಶಿಸಲಾಗಿತ್ತು. ಪರೀಕ್ಷೆ ಮುಂದೂಡಲು ಪ್ಲಾನ್ ಮಾಡಿದ್ದ ವಿದ್ಯಾರ್ಥಿ ಶಾಲೆಯಲ್ಲಿ ಬಾಂಬ್ ಇಡಲಾಗಿದೆ ಎಂದು ಇಮೇಲ್ ಮೂಲಕ ಬೆದರಿಕೆ ಹಾಕಿದ್ದಾನೆ.

ವಿದ್ಯಾರ್ಥಿಯನ್ನು ವಶಕ್ಕೆ ಪಡೆದಿರುವ ಆರ್.ಆರ್.ನಗರ ಪೊಲೀಸರು ಬಾಲ ಅಪರಾಧಿಗಳ ಪುನಶ್ಚೇತನ ಕೇಂದ್ರಕ್ಕೆ ಕಳುಹಿಸಿದ್ದಾರೆ.

error: Content is protected !!