ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ – ಆತಂಕ ಸೃಷ್ಠಿ

Team Newsnap
1 Min Read

ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ವ್ಯಕ್ಯಿಯೊಬ್ಬ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟಿರುವುದಾಗಿ ಇಂದು ಬೆಳಗಿನ ಜಾವ 3.30 ರ ಸುಮಾರಿಗೆ ದೂರವಾಣಿ ಕರೆ ಮಾಡಿದ್ದಾನೆ.

ಈ ಕರೆಯಿಂದಾಗಿ ವಿಮಾನ ನಿಲ್ದಾಣದಲ್ಲಿ ಕೆಲ ಕಾಲ ಆತಂಕದ ವಾತಾವರಣ ಸೃಷ್ಠಿಯಾಗಿತ್ತು.ಈ ಬೆದರಿಕೆ ಕರೆ ಹಿನ್ನೆಲೆಯಲ್ಲಿ ನಿಲ್ದಾಣವನ್ನು ಸಂಪೂರ್ಣವಾಗಿ ತಪಾಸಣೆ ಮಾಡಿದ ನಂತರ ಇದೊಂದು ಹುಸಿ ಕರೆ ಎಂದು ಹೇಳಲಾಗಿದೆ.

ಇದನ್ನು ಓದಿ : 1988ರ ರಸ್ತೆ ಗಲಭೆ ಪ್ರಕರಣ: ನವಜೋತ್ ಸಿಧುಗೆ 1 ವರ್ಷ ಜೈಲು ಶಿಕ್ಷೆ ಸುಪ್ರೀಂ

ಬಾಂಬ್ ಬೆದರಿಕೆ ಕರೆ ಬಂದ ನಂತರ ಪ್ರಯಾಣಿಕರು ಆತಂಕದಲ್ಲಿ ಇದ್ದರು. ಪೊಲೀಸರು ಟ್ರಮಿನಲ್ ಸೇರಿದಂತೆ ಎಲ್ಲಾ ಕಡೆಗಳಲ್ಲಿ ಬಾಂಬ್ ಸ್ಕ್ವಾಡ್ ಕರೆಸಿ ತಪಾಸಣೆ ಮಾಡಿದ ಬಳಿಕ ಅದೊಂದು ಹುಸಿ ಕರೆ ಎಂದು ಹೇಳಲಾಯಿತು.

Share This Article
Leave a comment