March 11, 2025

Newsnap Kannada

The World at your finger tips!

old mysuru , BJP Parva , CM

BJP Parva begins in Old Mysore Province - CM Bommai ಹಳೇ ಮೈಸೂರು ಪ್ರಾಂತದಲ್ಲಿ ಬಿಜೆಪಿ ಪರ್ವ ಆರಂಭ - ಸಿಎಂ ಬೊಮ್ಮಾಯಿ

ಬಿಎಸ್‌ವೈಗೆ ಬೊಮ್ಮಾಯಿ ಗಿಫ್ಟ್!

Spread the love

ರಾಜ್ಯದ ಇತಿಹಾಸದಲ್ಲಿ ಅಪರೂಪವೆಂಬಂತೆ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಡುಗೊರೆಯೊಂದು ನೀಡಿದ್ದಾರೆ.


ಮಾಜಿ ಸಿಎಂ ಬಿಎಸ್‌ವೈಗೆ ಸಂಪುಟ ದರ್ಜೆಯ ಸ್ಥಾನ ನೀಡಿ ಆದೇಶ ಹೊರಡಿಸಲಾಗಿದೆ. ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನೂತನ ಮುಖ್ಯಮಂತ್ರಿಗಳ ಅವಧಿ ಇರುವವರೆಗೆ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲ ಸೌಲಭ್ಯವನ್ನು ನೀಡಲಾಗುವುದೆಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ರಾಜೇಶ ಶಂಕ್ರಪ್ಪ ಸೂಳಿಕೇರಿ ಅಧಿಸೂಚನೆ ಹೊರಡಿಸಿದ್ದಾರೆ.
ತಾವು ಮುಖ್ಯಮಂತ್ರಿಯಾಗಲು ಕಾರಣಕರ್ತರಾದ ಯಡಿಯೂರಪ್ಪ ಅವರಿಗೆ ನೂತನ ಸಿಎಂ ಬಸವರಾಜ ಬೊಮ್ಮಾಯಿ ಗುರು “ದಕ್ಷಿಣೆ” ನೀಡಿದ್ದಾರೆ ಎಂಬುದು ರಾಜಕೀಯ ವಿಶ್ಲೇಷಕರ ಅಭಿಪ್ರಾಯ.

Copyright © All rights reserved Newsnap | Newsever by AF themes.
error: Content is protected !!