ಬೂಸ್ಟರ್ ಅಥವಾ ಮುನ್ನೆಚ್ಚರಿಕೆ ಡೋಸ್ ಪಡೆಯಲು ಕೊವಿನ್ ಆ್ಯಪ್‍ನಲ್ಲಿ ಮತ್ತೆ ನೋಂದಾಯಿಸಿಕೊಳ್ಳುವ ಅಗತ್ಯ ಇಲ್ಲ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ.
ಏಪ್ರಿಲ್ 10 ರಿಂದ 18 ವರ್ಷದ ಮೇಲ್ಪಟ್ಟ ಎಲ್ಲರಿಗೂ ಮುನ್ನೆಚ್ಚರಿಕೆ ಡೋಸ್ ಪಡೆಯಲು ಶಿಫಾರಸ್ಸು ಮಾಡಲಾಗಿದೆ.
ಆರೋಗ್ಯ ಇಲಾಖೆ ಕಾರ್ಯದರ್ಶಿಗಳು ಈ ಕುರಿತಂತೆ ಹೇಳಿಕೆ ನೀಡಿ, ಮೂರನೇ ಅಲೆಯ ಬಳಿಕ ಕೇಂದ್ರ ಸರ್ಕಾರವೂ ಆರೋಗ್ಯ ಕಾರ್ಯಕರ್ತರಿಗೆ, ಮುಂಚೂಣಿ ಹೋರಾಟಗಾರಿಗೆ ಮತ್ತು 60 ವರ್ಷ ಮೇಲ್ಪಟ್ಟ, ಅಪಾಯದ ಅಂಚಿನಲ್ಲಿರುವ ವೃದ್ಧರಿಗೆ ಮುನ್ನೆಚ್ಚರಿಕೆ ಡೋಸ್ ಹೆಸರಿನಲ್ಲಿ ಬೂಸ್ಟರ್ ಡೋಸ್ ನೀಡಲಾಗುತ್ತಿತ್ತು. ಈಗ ನಾಲ್ಕನೇ ಅಲೆಯ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರೂ ಬೂಸ್ಟರ್ ಡೋಸ್ ಪಡೆಯಬಹುದು.
ಬೆಲೆ ಇಳಿಕೆ
ಖಾಸಗಿ ಆಸ್ಪತ್ರೆಯಲ್ಲಿ ಬೂಸ್ಟರ್ ಡೋಸ್ ಪಡೆಯುವ ಜನರು ಸರ್ಕಾರ ನಿಗಧಿಪಡಿಸಿರುವ ವ್ಯಾಕ್ಸಿನ್ ಬೆಲೆಯ ಮೇಲೆ 150 ವರೆಗೂ ಸೇವಾ ಶುಲ್ಕ ನೀಡಬಹುದು. ಅದಕ್ಕಿಂತ ಹೆಚ್ಚಿನ ಹಣವನ್ನು ಆಸ್ಪತ್ರೆಗಳು ಕೇಳುವಂತಿಲ್ಲ ಎಂದು ಆರೋಗ್ಯ ಇಲಾಖೆ ಇದೇ ಸಂದರ್ಭದಲ್ಲಿ ತಿಳಿಸಿದ್ದು, ಮೊದಲ ಮತ್ತು ಎರಡನೇ ಬಾರಿ ತೆಗೆದುಕೊಂಡ ವ್ಯಾಕ್ಸಿನ್ ಅನ್ನೇ ಮೂರನೇ ಡೋಸ್‍ನಲ್ಲಿ ಪಡೆಯಬೇಕು. ವ್ಯಾಕ್ಸಿನ್ ಕಂಪನಿಗಳನ್ನು ಬದಲಿಸಬಾರದು ಎಂದು ಆರೋಗ್ಯ ಇಲಾಖೆ ಹೇಳಿದೆ.
- ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – ಯುವತಿ ಸಜೀವ ದಹನ
- 100 ಕೋಟಿ ವಂಚನೆ ಪ್ರಕರಣ: ದೆಹಲಿಯಲ್ಲಿ ಚೀನಾ ಪ್ರಜೆ ಬಂಧನ
- ರೈತರ ಕೃಷಿ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ : ಸಚಿವ ಜಾರ್ಜ್ ಪ್ರಕಟ
- ಶಬರಿಮಲೈ ಭಕ್ತರಿದ್ದ ಬಸ್ ಪಲ್ಟಿ: ರಾಜ್ಯದ 27 ಮಂದಿ ಗಾಯ
- ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಾರತ ತಂಡದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಭೇಟಿ
More Stories
ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – ಯುವತಿ ಸಜೀವ ದಹನ
ರೈತರ ಕೃಷಿ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ : ಸಚಿವ ಜಾರ್ಜ್ ಪ್ರಕಟ
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಾರತ ತಂಡದ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಭೇಟಿ