ಗಡಿ ವಿವಾದ : ಶಾಂತಿಗಾಗಿ ಸಿಎಂ ಬೊಮ್ಮಾಯಿ- ಶಿಂಧೆ ಒಪ್ಪಿಗೆ : ಬಸ್ ಸಂಚಾರ ಸ್ಥಗಿತ- ಕರವೇ ಕಾರ್ಯಕರ್ತರ ವಿರುದ್ದ FIR

Team Newsnap
2 Min Read

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಮಂಗಳವಾರ ರಾತ್ರಿ ದೂರವಾಣಿ ಕರೆ ಮಾಡಿ ಮಾತುಕತೆ ಮೂಲಕ, ಶಾಂತಿ ಕಾಪಾಡುವುದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ.

ಎರಡೂ ರಾಜ್ಯಗಳ ಜನರ ನಡುವೆ ಸಾಮರಸ್ಯದ ಸಂಬಂಧವಿದೆ, ಕರ್ನಾಟಕದ ಗಡಿಗೆ ಸಂಬಂಧಿಸಿದಂತೆ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಮತ್ತು ಕಾನೂನು ಹೋರಾಟವನ್ನು ಸರ್ವೋಚ್ಚ ನ್ಯಾಯಾಲಯದಲ್ಲಿ ಮುಂದುವರಿಸಲಾಗುವುದು ಎಂದು ಹೇಳಿದ್ದಾರೆ. ಕರ್ನಾಟಕ ಸರ್ಕಾರದಿಂದ 2,500 ರೂ.ಗಳಲ್ಲಿ ತಿಮ್ಮಪ್ಪನ ದರ್ಶನಕ್ಕೆ ಸ್ಪೆಷಲ್‌ ಪ್ಯಾಕೇಜ್‌

ಈ ಸಂಗತಿ ಕುರಿತಂತೆ ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನನ್ನೊಂದಿಗೆ ದೂರವಾಣಿ ಮೂಲಕ ಚರ್ಚಿಸಿದರು, ಎರಡೂ ರಾಜ್ಯಗಳಲ್ಲಿ ಶಾಂತಿ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಬೇಕು ಎಂದು ನಾವಿಬ್ಬರೂ ಒಪ್ಪಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

ಬಸ್ ಸಂಚಾರ ಸ್ಥಗಿತ :

WhatsApp Image 2022 12 07 at 8.30.58 AM

ಮಹಾರಾಷ್ಟ್ರ ಸರ್ಕಾರವು ಕರ್ನಾಟಕಕ್ಕೆ ಬಸ್ ಸೇವೆಗಳನ್ನು ಸ್ಥಗಿತಗೊಳಿಸಿದೆ. ಕರ್ನಾಟಕಕ್ಕೆ ಹೋಗುವ ಪ್ರಯಾಣಿಕರನ್ನು ರಕ್ಷಿಸಲು ಮತ್ತು ಅವರ ಆಸ್ತಿಯನ್ನು ಹಾನಿಯಿಂದ ರಕ್ಷಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ,ಪೊಲೀಸರ ಸಲಹೆಯ ನಂತರ ಸಾರಿಗೆ ನಿಗಮವು ಬಸ್ ಸೇವೆಯನ್ನು ನಿಲ್ಲಿಸಲು ನಿರ್ಧರಿಸಿದೆ ಎಂದು ಮಹಾರಾಷ್ಟ್ರ ರಾಜ್ಯ ಸಾರಿಗೆ ನಿಗಮದ ಉಪಾಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಶೇಖರ್ ಚನ್ನೆ ಹೇಳಿದರು.

ಮಹಾರಾಷ್ಟ್ರದಿಂದ ಕರ್ನಾಟಕವನ್ನು ಪ್ರವೇಶಿಸುವ ವಾಹನಗಳ ಮೇಲೆ ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಟೋಲ್ ಬೂತ್ ಬಳಿ ಕಲ್ಲು ತೂರಾಟ ನಡೆದಿತ್ತು. ಈ ಘಟನೆಯ ನಂತರ, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಕಾರ್ಯಕರ್ತರು ಪುಣೆ ನಗರದ ಸ್ವರ್ಗೇಟ್ ಪ್ರದೇಶದಲ್ಲಿ ಕನಿಷ್ಠ ಮೂರು ಕರ್ನಾಟಕ ರಾಜ್ಯ ಸಾರಿಗೆ ನಿಗಮದ ಬಸ್ಸುಗಳಿಗೆ ಕಪ್ಪು ಮಸಿ ಬಳಿದು ‘ಜೈ ಮಹಾರಾಷ್ಟ್ರ’ ಘೋಷಣೆಗಳನ್ನು ಸಹ ಬರೆದಿದ್ದಾರೆ

ಕರವೇ ಕಾರ್ಯಕರ್ತರ ವಿರುದ್ದ FIR :

WhatsApp Image 2022 12 07 at 8.43.10 AM

ಮಹಾರಾಷ್ಟ್ರ ಲಾರಿಗಳ ಮೇಲೆ ಕಲ್ಲು ತೂರಾಟ ನಡೆಸಿದ ಕರವೇ ಕಾರ್ಯಕರ್ತರ ವಿರುದ್ಧ `FIR’ ದಾಖಲು ಮಾಡಲಾಗಿದೆ. ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಸಂಬಂಧ ನಿನ್ನೆ ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿಯಲ್ಲಿ ಪ್ರತಿಭಟನೆ ನಡೆಸಿದ್ದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಕರವೇ ನಾರಾಯಣಗೌಡ ಬಣದ 8 ರಿಂದ 12 ಕಾರ್ಯಕರ್ತರ ವಿರುದ್ಧ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ನಿನ್ನೆ ಬೆಳಗಾವಿ ಪ್ರವೇಶಕ್ಕೆ ಅವಕಾಶ ನೀಡದಿದ್ದಕ್ಕೆ ಕರವೇ ಆಕ್ರೋಶ ವ್ಯಕ್ತಪಡಿಸಿತ್ತು. ಈ ವೇಳೆ ಮಹಾರಾಷ್ಟ್ರ ಲಾರಿಗಳ ಮೇಲೆ ಕಲ್ಲು ತೂರಾಟ ಮಾಡಿ ಲಾರಿಗಳ ನಂಬರ್ ಪ್ಲೇಟ್ ಕಿತ್ತು, ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದರು.

Share This Article
Leave a comment