ಗುಜರಾತ್‍ನ ಅಹಮದಾಬಾದ್‍ನಲ್ಲಿರುವ ಗಾಂಧೀಜಿ ಸಬರಮತಿ ಆಶ್ರಮಕ್ಕೆ ಇಂದು ಬೆಳಿಗ್ಗೆ ಭೇಟಿ ನೀಡಿದ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಚರಕ ಹಿಡಿದು ನೂಲು ತೆಗೆಯಲು ಪ್ರಯತ್ನಿಸಿದರು.
ಮಹಾತ್ಮಾ ಗಾಂಧಿ ಆಶ್ರಮದಲ್ಲಿನ ಆಟೋಗ್ರಾಫ್ ಪುಸ್ತಕದಲ್ಲಿ ಬೋರಿಸ್ ಜಾನ್ಸನ್ ಒಂದು ಚಿಕ್ಕ ಟಿಪ್ಪಣಿಯನ್ನು ಬರೆದಿದ್ದಾರೆ.

ಈ ಅಸಾಮಾನ್ಯ ವ್ಯಕ್ತಿಯ ಆಶ್ರಮಕ್ಕೆ ಬರಲು ಮತ್ತು ಜಗತ್ತನ್ನು ಉತ್ತಮವಾಗಿ ಬದಲಾಯಿಸಲು ಗಾದೀಜಿ ಸತ್ಯ ಮತ್ತು ಅಹಿಂಸೆಯಂತಹ ಸರಳವಾದ ತತ್ವಗಳನ್ನು ಹೇಗೆ ಸಿದ್ಧಗೊಳಿಸಿದರು ಎಂಬುದನ್ನು ತಿಳಿದುಕೊಳ್ಳುವುದೇ ದೊಡ್ಡ ಸೌಭಾಗ್ಯವಾಗಿದೆ ಎಂದು ಹೇಳಿದ್ದಾರೆ.
ದ್ವಿಪಕ್ಷೀಯ ಬಾಂಧವ್ಯವನ್ನು ಬಲಪಡಿಸಲು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಎರಡು ದಿನಗಳ ಕಾಲ ಭಾರತದಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಗುರುವಾರ ದಿನವಿಡೀ ಗುಜರಾತ್‍ನಲ್ಲಿದ್ದು ಸಂಜೆ ದೆಹಲಿಗೆ ತೆರಳಲಿದ್ದಾರೆ. ಶುಕ್ರವಾರ ಪ್ರಧಾನಿ ಮೋದಿಯವರೊಂದಿಗೆ ವಿಸ್ತೃತ ಮಾತುಕತೆ ನಡೆಸಲಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ