ನಿಫಾ ವೈರಸ್ ಲಕ್ಷಣ ಹೊಂದಿ, ಕೇರಳದ ಕೋಯಿಕ್ಕೋಡ್ ಆಸ್ಪತ್ರೆಗೆ ದಾಖಲಾಗಿದ್ದ 12 ವರ್ಷದ ಬಾಲಕ ಭಾನುವಾರ ಸಾವನ್ನಪ್ಪಿದನು.
ಚತಮಂಗಲಂ ಪಂಚಾಯತ್‌ನ ಚೂಲೂರಿನ ಈ ಬಾಲಕ ಸೆಪ್ಟೆಂಬರ್ 1 ರಂದು ಆಸ್ಪತ್ರೆಗೆ ದಾಖಲಿಸಲಾಯಿತು.
ಆತನ ಕಫ , ರಕ್ತದ ಮಾದರಿಗಳನ್ನು ಪುಣೆ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಗೆ ಕಳುಹಿಸಲಾಗಿತ್ತು. ನಿಪಾ ವೈರಸ್ ಇರುವುದು ದೃಡವಾಗಿತ್ತು.
ನಿಪಾಹ್ ಸೋಂಕಿನ ಮಾಹಿತಿಯ ನಂತರ ರಾಜ್ಯ ಸರ್ಕಾರ ಶನಿವಾರ ತಡರಾತ್ರಿ ಆರೋಗ್ಯ ಅಧಿಕಾರಿಗಳ ಉನ್ನತ ಮಟ್ಟದ ಸಭೆ ನಡೆಸಿದರು. ಈ ಸಭೆಯ ನಂತರ ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಾತನಾಡಿ, ಮೃತರ ಪ್ರಾಥಮಿಕ ಸಂಪರ್ಕದ ಪಟ್ಟಿಯಲ್ಲಿರುವವರಿಗೆ ಯಾವುದೇ ರೋಗಲಕ್ಷಣಗಳು ಕಂಡು ಬಂದಿಲ್ಲ. ಆದರೆ ಅವರನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಹೇಳಿದರು.
ಈ ಬಾಲಕನಿಗೆ ಮೂರು ಮಾದರಿಗಳು ಇದ್ದವು – ಪ್ಲಾಸ್ಮಾ, ಸಿಎಸ್‌ಎಫ್ ಮತ್ತು ಸೀರಮ್- ಸೋಂಕಿತವೆಂದು ಕಂಡುಬಂದಿದೆ. ನಾಲ್ಕು ದಿನಗಳ ಹಿಂದೆ ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದರು.
ಆದರೆ ಶನಿವಾರ, ಅವನ ಸ್ಥಿತಿ ಹದಗೆಟ್ಟಿತು. ಹಿಂದಿನ ದಿನ ನಾವು ಅವರ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಿದ್ದೇವೆ ಎಂದು ಸಚಿವರು ಹೇಳಿದರು.
ನೆರೆಯ ಕಣ್ಣೂರು ಮತ್ತು ಮಲಪ್ಪುರಂ ಜಿಲ್ಲೆಗಳು ಜಾಗರೂಕರಾಗಿರಬೇಕು ಎಂದು ಜಾರ್ಜ್ ಹೇಳಿದರು.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ