ಡಾಬಾದಲ್ಲಿ ಊಟ ಮಾಡುತ್ತಿದ್ದ ಯುವಕನನ್ನು ಇರಿದು ಬರ್ಬರವಾಗಿ ಕೊಲೆಗೈದ ಘಟನೆ ಕಳೆದ ರಾತ್ರಿ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೊಪ್ಪ ಗ್ರಾಮ ಸಿಂಚನ ಡಾಬಾದಲ್ಲಿ ನಡೆದಿದೆ. ಕೊಪ್ಪ ಗ್ರಾಮದ ಸಾಗರ್ (25) ಹತ್ಯೆಯಾದ ಯುವಕ.
ಡಾಬಾದಲ್ಲಿ ಊಟ ಮಾಡುತ್ತಿದ್ದಾಗ ಪಕ್ಕದ ಟೇಬಲಿನಲ್ಲಿ ಗಲಾಟೆ ನಡೆಯಿತು. ಈ ವೇಳೆ ಗಲಾಟೆ ಬಿಡಿಸಲು ಸಾಗರ್ ಮಧ್ಯಪ್ರವೇಶ ಮಾಡಿದ್ದ. ಆಗ ಸಾಗರ್ ಎದೆಗೆ ಗಿರೀಶ್ ಚಾಕುವಿನಿಂದ ಚುಚ್ಚಿದ್ದಾನೆ. ತಕ್ಷಣ ಸಾಗರ್ ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್ ಗೆ ರವಾನೆ ಮಾಡಲಾಯಿತು. ಆ ವೇಳೆ ಆತ ಕೊನೆಯುಸಿರೆಳೆದಿದ್ದನು.
ಘಟನೆ ಸಂಬಂಧಿಸಿದಂತೆ ಓರ್ವ ಆರೋಪಿ ರಾಕೇಶ್‍ನನ್ನು ಪೊಲೀಸರು ಬಂಧಿಸಿದ್ದಾರೆ ಮತ್ತಿಬ್ಬರಾದ ಗಿರೀಶ್ ಹಾಗೂ ಪ್ರತಾಪ್ ಗಾಗಿ ಶೋಧ ನಡೆಸುತ್ತಿದ್ದಾರೆ. ಕೊಪ್ಪ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ