ಆನ್ಲೈನ್ ಗೇಮ್ ಆಡಬೇಡ ಮಗನೇ ಎಂದು ತಾಯಿ ಹೇಳಿದ್ದಕ್ಕೆ ಬಾಲಕನೊಬ್ಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಓಂ ಭಾರತ್ (16) ಮೃತ ದುರ್ದೈವಿ ಬಾಲಕ ಪ್ರತಿ ಬಾರಿಯು ಆನ್ಲೈನ್ ಗೇಮ್ ಆಡುತ್ತಿದ್ದ. ಈ ಸಂದಂರ್ಭದಲ್ಲಿ ತಾಯಿ ಮೊಬೈಲ್ ಕಸಿದುಕೊಂಡು ಓದಿನ ಕಡೆ ಗಮನಹರಿಸು ಎಂದು ಹೇಳಿದ್ದಾರೆ. ಇದೇ ಕಾರಣಕ್ಕೆ ಬಾಲಕ ಮನನೊಂದು ಡೇತ್ ನೋಟ್ ಬರೆದಿದ್ದಾನೆ. ಬಳಿಕ ರೈಲಿನ ಹಳಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬಾಲಕನ ಪತ್ರ ನೋಡಿದ ತಾಯಿ ದಿಂಡೋಶಿ ತಕ್ಷಣವೇ ಪೊಲೀಸ್ ಠಾಣೆ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇರೆಗೆ ಪೊಲೀಸರು ಬಾಲಕನ ಹುಡುಕಾಟ ಆರಂಭಿಸಿದರು. ಆಗ ಮಲಾಡ್ ಮತ್ತು ಕಾಂಡಿವಲಿ ಸ್ಟೇಷನ್ಗಳ ನಡುವೆ ರೈಲು ಹಳಿಯ ಮೇಲೆ ಒಂದು ಮೃತದೇಹ ದೊರೆತಿರುವ ಮಾಹಿತಿ ಲಭ್ಯವಾಗುತ್ತದೆ.
ಇದನ್ನು ಓದಿ – ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡ ಯುವಕನ ಅಂಗಾಂಗ ದಾನ
ತಕ್ಷಣ ಅಲ್ಲಿಗೆ ತೆರಳಿ ನೋಡಿದಾಗ ಅದೇ ಬಾಲಕನೇ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬರುತ್ತದೆ. ಹೀಗಾಗಿ ಬೋರಿವಲಿ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ