ಸೂಪರ್ಸ್ಟಾರ್ ರಜನೀಕಾಂತ್ ಗೆ ರಕ್ತ ದೊತ್ತಡದಲ್ಲಿ ಭಾರಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ಶುಕ್ರವಾರ ಹೈದ್ರಾಬಾದ್ ನಲ್ಲಿ ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಚೆನ್ನೈ ನಲ್ಲಿರುವ ಫಾರ್ಮ್ ಹೌಸ್ನಲ್ಲಿ ರಜನಿ ಪ್ರತ್ಯೇಕ ತಂಗಿದ್ದರು. ತಮ್ಮ ಅಭಿನಯದ ‘ಅಣ್ಣಾತ್ತೆ’ ಚಿತ್ರತಂಡದ ನಾಲ್ವರಲ್ಲಿ ಕರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಚಿತ್ರೀಕರಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ರಜೀನಿಕಾಂತ್ ಹೋಂ ಕ್ವಾರೆಂಟೈನ್ ನಲ್ಲಿ ಇದ್ದರು.
ನಂತರ ಹೈದ್ರಾಬಾದ್ ನಲ್ಲಿ ನಡೆಯುತ್ತಿದ್ದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ರಕ್ತದೊತ್ತಡದಲ್ಲಿ ಏರಿಳಿತದ ಸಮಸ್ಯೆಯಿಂದ ಹೈದ್ರಾಬಾದ್ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವುದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ. ಗುರುವಾರವಷ್ಟೇ ರಜಿನಿ ಅವರಿಗೆ ಕರೊನಾ ನೆಗಟಿವ್ ವರದಿಯಾಗಿತ್ತು.
‘ಅಣ್ಣಾತ್ತೆ’ ಚಿತ್ರವನ್ನು ಜನವರಿ 12ರೊಳಗೆ ಮುಗಿಸಬೇಕು ಎಂದು ಪ್ಲಾನ್ ಹಾಕಿಕೊಂಡಿದ್ದರು. ಅದಕ್ಕಾಗಿ ಕಳೆದ ಕೆಲವು ದಿನಗಳಿಂದ, ಪ್ರತಿದಿನ 12 ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದರು. ಚಿತ್ರೀಕರಣ ಸಹ ಸಾಕಷ್ಟು ಮುಗಿದಿತ್ತು. ಎಲ್ಲಾ ಚೆನ್ನಾಗಿ ನಡೆಯುತ್ತಿರುವಾಗ, ಚಿತ್ರತಂಡದ ನಾಲ್ವರಿಗೆ ಕರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ಚಿತ್ರೀಕರಣ ಅನಿವಾರ್ಯವಾಗಿ ಮುಂದಕ್ಕೆ ಹಾಕಲಾಗಿದೆ.
ಮುಂದಿನ ವರ್ಷ ತಮಿಳುನಾಡಿನಲ್ಲಿ ಚುನಾವಣೆಗಳು ನಡೆಯಲಿದೆ. ರಜನಿಕಾಂತ್ ಅವರ ರಾಜಕೀಯ ಪಕ್ಷ ಕಟ್ಟಿ ಸ್ವತಂತ್ರವಾಗಿ ಸ್ಪರ್ಧಿಸಲಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಒಪ್ಪಿಕೊಂಡಿರುವ ‘ಅಣ್ಣಾತ್ತೆ’ ಚಿತ್ರದ ಚಿತ್ರೀಕರಣವನ್ನು ಆದಷ್ಟು ಬೇಗ ಮುಗಿಸುವ ಆಲೋಚನೆ ಯಲ್ಲಿ ಇದ್ದಾರೆ.
‘ಅಣ್ಣಾತ್ತೆ’ ಚಿತ್ರದಲ್ಲಿ ರಜನಿಕಾಂತ್ ಜೊತೆಗೆ ನಯನತಾರಾ, ಖುಷ್ಬೂ, ಮೀನಾ, ಕೀರ್ತಿ ಸುರೇಶ್ ನಟಿಸುತ್ತಿದ್ದಾರೆ. ಶಿವಾ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.
- ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು
- ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್
- ₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ
- ಮುಡಾ ಹಗರಣ: ಸ್ನೇಹಮಯಿ ಕೃಷ್ಣ ಮತ್ತು ಕೈ ಮುಖಂಡ ಲಕ್ಷ್ಮಣ್ ನಡುವೆ ವಾಗ್ವಾದ
- ಯೋಗ ಗುರು ಶರತ್ ಜೋಯಿಸ್ ಹೃದಯಾಘಾತದಿಂದ ನಿಧನ
More Stories
ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು
ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್
₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ