ಹೆಚ್ಚುವರಿ ಅಕ್ಕಿಯ ಸಿಹಿಸುದ್ದಿ
ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿದಾರರಿಗೆ ಮಾರ್ಚ್ ತಿಂಗಳಲ್ಲಿ ಫೆಬ್ರವರಿ ಮತ್ತು ಮಾರ್ಚ್ ಎರಡು ತಿಂಗಳ ಪಡಿತರವನ್ನು ಸೇರಿಸಿ ಹೆಚ್ಚುವರಿ 10 ಕೆ.ಜಿ. ಅಕ್ಕಿ ನೀಡಲಾಗುತ್ತದೆ ಎಂದು ಸಚಿವ ಮುನಿಯಪ್ಪ ಘೋಷಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 2.90 ಲಕ್ಷ ಪಡಿತರ ಕಾರ್ಡ್‌ಗಳ ಪರಿಷ್ಕರಣೆ ಮಾಡಲಾಗಿದೆ. ಈ ಪೈಕಿ 1.65 ಲಕ್ಷ ಪಡಿತರ ಚೀಟಿಗಳನ್ನು ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.ಕರ್ನಾಟಕದಲ್ಲಿ ಬಿಸಿಗಾಳಿಯ ಉಲ್ಬಣ: ಆರೋಗ್ಯ ಇಲಾಖೆಯ ಮುನ್ನೆಚ್ಚರಿಕೆ ಸೂಚನೆಗಳು
ಅಕ್ಕಿ ವಿತರಣೆಯ ಬಗ್ಗೆ ಸ್ಪಷ್ಟನೆ
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ 10 ಕೆ.ಜಿ. ಹೆಚ್ಚುವರಿ ಅಕ್ಕಿ ನೀಡುವುದಾಗಿ ಘೋಷಿಸಲಾಗಿತ್ತು. ಆದರೆ, ಕೇಂದ್ರ ಸರ್ಕಾರ ಮತ್ತು ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾ ತಕ್ಷಣವೇ ಅಕ್ಕಿ ನೀಡಲು ಮುಂದೆ ಬರಲಿಲ್ಲ. ಆದರೆ ಈಗ, ಅಗತ್ಯ ಅಕ್ಕಿ ಒದಗಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿರುವುದರಿಂದ, ಫೆಬ್ರವರಿಯಿಂದಲೇ ಹಣದ ಬದಲು ಅಕ್ಕಿ ವಿತರಣೆ ಪ್ರಾರಂಭ ಮಾಡಲಾಗುತ್ತದೆ. ಇದರಿಂದ ಬಡಕುಟುಂಬಗಳಿಗೆ ಅಗತ್ಯ ಆಹಾರಸುರಕ್ಷತೆ ಲಭಿಸಲಿದೆ ಎಂದು ಸಚಿವರು ತಿಳಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು