ಐಪಿಎಸ್ ರವಿ ಡಿ ಚೆನ್ನಣ್ಣವರ್ ವರ್ಗಾವಣೆ ಆದೇಶಕ್ಕೆ ಸದ್ಯ ಬ್ರೇಕ್ ಬಿದ್ದಿದೆ.
ಮಠಾಧೀಶರ ಒತ್ತಡಕ್ಕೆ ಮಣಿದು ಒಂದೇ ದಿನಕ್ಕೆ ಸರ್ಕಾರ ತನ್ನ ಆದೇಶವನ್ನು ತಡೆಹಿಡಿದಿದೆ.
ಎರಡು ದಿನಗಳ ಹಿಂದೆ ರವಿ ಡಿ.ಚನ್ನಣ್ಣನವರ್ ಸೇರಿದಂತೆ 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.
ಸಿಐಡಿ ಎಸ್‍ಪಿ ಆಗಿದ್ದ ರವಿ ಡಿ. ಚನ್ನಣ್ಣನವರ್ ಅವರನ್ನು ವಾಲ್ಮೀಕಿ ಅಭಿವೃದ್ಧಿ ನಿಗಮದ ಎಂಡಿಯಾಗಿ ವರ್ಗಾಯಿಸಲಾಗಿತ್ತು. ಆದರೆ ಇದೀಗ ಸರ್ಕಾರ ಮುಂದಿನ ಆದೇಶದವರೆಗೆ ತಡೆಹಿಡಿದಿದೆ.
ಕೆಲ ದಿನಗಳಿಂದ ರವಿ ಡಿ.ಚನ್ನಣ್ಣನವರ್ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಕೇಳಿ ಬರುತ್ತಿವೆ. ಈ ಸಂಬಂಧ ಪರ-ವಿರೋಧ ಚರ್ಚೆಗಳೂ ನಡೆಯುತ್ತಿವೆ. ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಸುದ್ದಿಗಳು ಪ್ರಸಾರವಾಗದಂತೆ ಕ್ರಮವಹಿಸಲು ಚನ್ನಣ್ಣನವರ್ ಕೋರ್ಟ್‍ನಿಂದ ತಡೆಯಾಜ್ಞೆ ತಂದಿದ್ದರು. ಇದರ ಮಧ್ಯೆಯೇ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿತ್ತು.
- ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
- ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
- ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ
- ಬ್ಯಾಂಕ್ ಆಫ್ ಬರೋಡಾ: 1267 ಹುದ್ದೆಗಳಿಗೆ ಅರ್ಜಿ ಆಹ್ವಾನ
- ಏಕಾದಶಿ ಉಪವಾಸದ ಬಗ್ಗೆ ವೈಜ್ಞಾನಿಕ ಚಿಂತನೆ ಏನು ಹೇಳುತ್ತದೆ?
More Stories
ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ