ನಟಿ ಹಂಸ ನಂದಿನಿಗೆ ಸ್ತನ ಕ್ಯಾನ್ಸರ್‌ – ಅಭಿಮಾನಿಗಳಿಗೆ ಶಾಕ್

Team Newsnap
1 Min Read

ಕನ್ನಡ ಸೇರಿದಂತೆ ತೆಲುಗು ಸಿನಿಮಾಗಳಲ್ಲಿ ಅಭಿನಯಿಸಿರುವ ನಟಿ ಹಂಸ ನಂದಿನಿ ಕ್ಯಾನ್ಸರ್​ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಲೆ ಕೂದಲು ತೆಗೆಸಿಕೊಂಡು ಚಿಕಿತ್ಸೆ ಪಡೆಯುತ್ತಿರುವ ಸಂದರ್ಭದ ಫೋಟೋವನ್ನು ಶೇರ್​ ಮಾಡಿಕೊಂಡು ನಟಿ ಹಂಸ ನಂದಿನಿ ಅಭಿಮಾನಿಗಳಿಗೆ ಮಾಹಿತಿ ನೀಡಿದ್ದಾರೆ.

ಈ ಕುರಿತಂತೆ ಟ್ವಿಟ್ ಮಾಡಿರುವ ನಟಿ ಕ್ಯಾನ್ಸರ್‌ನಿಂದ ನಾನು ಭಯಗೊಂಡಿಲ್ಲ, ಕಷ್ಟಗಳನ್ನು ಧೈರ್ಯದಿಂದ ಎದುರಿಸುತ್ತೇನೆ ಎಂದು ಕೂದಲು ಇಲ್ಲದ ತಲೆಯ ಫೋಟೋವನ್ನುಶೇರ್​ ಮಾಡಿದ್ದಾರೆ ಚಿಕಿತ್ಸೆ ಮುಂದುವರಿದಿದೆ. ಮತ್ತೊಂದು ಸ್ತನಕ್ಕೂ ಕ್ಯಾನ್ಸರ್​ ಹಬ್ಬುವ ಸಾಧ್ಯತೆ ಇದೆ ಎಂದು ವೈದ್ಯರು ಹೇಳಿದ್ದಾರೆ ಅಂತ ತಿಳಿಸಿದ್ದಾರೆ.

ಹಂಸ ನಂದಿನಿ ಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ 3ನೇ ಹಂತದ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು 9 ಹಂತಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ತಿಳಿಸಿದ್ದಾರೆ. ನಟಿಯ ಫೋಟೋ ನೋಡಿದ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

Share This Article
Leave a comment