ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲ್ ರೋಡ್ ಅರಣ್ಯ ಪ್ರದೇಶದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಜೋಸೆಫ್ ಆಳ್ಬಗನ್‌ನಿಂದ 60,000 ರೂ. ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಅಧಿಕಾರಿಯನ್ನು ಬಂಧಿಸಿದ್ದಾರೆ.
ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೊರನೂರು ಹುಣಸೆ ಮರ ಬಾವಿಯ ಹತ್ತಿರ 10 ಲಕ್ಷ ರೂ. ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಮಾಡಲು ಯೋಜನೆ ಸಲ್ಲಿಸಲಾಗಿತ್ತು. ವಲಯ ಅರಣ್ಯಾಧಿಕಾರಿ ಕಾಂತರಾಜ್ ಚೌಹಾಣ್, ಕಾಮಗಾರಿ ಪ್ರಾರಂಭಿಸಲು 80,000 ರೂ. ಲಂಚ ನೀಡಬೇಕೆಂದು ಬೇಡಿಕೆ ಇಟ್ಟಿದ್ದರು.
ಲಂಚ ಬೇಡಿಕೆಯಿಂದ ಬೇಸತ್ತ ಗ್ರಾಮ ಪಂಚಾಯಿತಿ ಸದಸ್ಯ ಜೋಸೆಫ್ ಆಳ್ಬಗನ್ ಚಾಮರಾಜನಗರ ಲೋಕಾಯುಕ್ತ ಕಚೇರಿಗೆ ದೂರು ನೀಡಿದ್ದರು. ದೂರು ವೇಳೆ, ಈಗಾಗಲೇ ಮುಂಗಡವಾಗಿ 20,000 ರೂ. ನೀಡಿದ ಮಾಹಿತಿ ನೀಡಿ, ಉಳಿದ 60,000 ರೂ. ಕೊಡುತ್ತಿದ್ದ ಸಮಯದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು.ಇದನ್ನು ಓದಿ –ಉಪಚುನಾವಣೆ: ಭರತ್ ಬೊಮ್ಮಾಯಿ, ಯೋಗೇಶ್ವರ್ ನಾಮಪತ್ರ ಸಲ್ಲಿಕೆ
ಈ ಪ್ರಕರಣದ ಕುರಿತು ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು