ತಮ್ಮ ವಿರುದ್ಧ ನೀಡಿದ್ದ ದೂರನ್ನು ಹಿಂಪಡೆಯುವಂತೆ ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತರೊಬ್ಬರಿಗೆ ಲಂಚ ನೀಡುವಾಗ ಪಿಡಿಒ ಮಂಜಮ್ಮ ಎಸಿಬಿ ಬಲೆಗೆ ಬಿದ್ದ ಘಟನೆ ಕೊರಟಗೆರೆ ತಾಲೂಕಿನ ಜಟ್ಟಿ ಅಗ್ರಹಾರ ಗ್ರಾಮ ಪಂಚಾಯತಿಯಲ್ಲಿ ಜರುಗಿದೆ.
ಜಟ್ಟಿ ಅಗ್ರಹಾರ ಗ್ರಾಮದ ಸಾಮಾಜಿಕ ಕಾರ್ಯಕರ್ತ ನಾಗರಾಜು ಪಂಚಾಯಿತಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ಅನುದಾನ ದುರುಪಯೋಗ ವಾಗಿರುವ ಬಗ್ಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ದೂರು ನೀಡಿದ್ದರು.
ಈ ಕುರಿತಂತೆ ಸಿಇಒ ತನಿಖೆಗೂ ಆದೇಶಿಸಿದ್ದರಿಂದ ದೂರನ್ನು ವಾಪಸ್ ಪಡೆಯಲು ಪಿಡಿಒ ಮಂಜಮ್ಮ ಗ್ರಾಮ ಪಂಚಾಯಿತಿ ಸದಸ್ಯ ಪ್ರಭಾಕರ ಮೂಲಕ ₹1000 ನೀಡುವುದಾಗಿ ನಾಗರಾಜು ಅವರಿಗೆ ಆಮಿಷ ವೊಡ್ಡಿದ್ದರು.
ಗ್ರಾಮ ಪಂಚಾಯಿತಿ ಸದಸ್ಯರ ಮೂಲಕ ಹಣ ನೀಡುವ ಸಂದರ್ಭದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಹಣದ ಸಮೇತ ಆರೋಪಿಗಳಾದ ಗ್ರಾಮಪಂಚಾಯಿತಿ ಸದಸ್ಯ ಪ್ರಭಾಕರ್ ಹಾಗೂ ಪಿಡಿಒ ಮಂಜಮ್ಮ ಅವರನ್ನು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ