ಯುವತಿಯ ಸುಂದರ ಬದುಕು ಕಟ್ಟಿಕೊಳ್ಳುವ ಮನ್ನವೇ ಮದುವೆಯ ಆರತಕ್ಷತೆ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಜರುಗಿದೆ.
ತನ್ನ ಮದುವೆಯ ಆರತಕ್ಷತೆಯಲ್ಲಿ ಕುಸಿದು ಬಿದ್ದು ಮದುಮಗಳು ತೀವ್ರ ಅಸ್ವಸ್ಥಳಾಗಿದ್ದಾಳೆ. ತಕ್ಷಣ ಆಕೆಯನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ಸೇರಿಸಿದಾಗ ವೈದ್ಯರು ಆಕೆ ಬ್ರೈನ್ ಡೆಡ್ ಎಂದು ಘೋಷಿಸಿದ್ದಾರೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಕೊಡಚೆರವು ಗ್ರಾಮದ ಕೃಷಿಕ ರಾಮಪ್ಪ ಎಂಬುವರ ಮಗಳು ಚೈತ್ರಾ ಎಂಎಸ್ಸಿ ಬಯೋಕೆಮಿಸ್ಟ್ರಿ ಮಾಡಿ, ಕೈವಾರದಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದರು.
ಫೆಬ್ರವರಿ 6 ರಂದು ಸಂಜೆ ಶ್ರೀನಿವಾಸಪುರ ಪಟ್ಟಣದಲ್ಲಿ ಆರತಕ್ಷತೆ ನಡೆದಿತ್ತು. ಹೊಸಕೋಟೆ ಮೂಲದ ಯುವಕನೊಂದಿಗೆ ಚೈತ್ರಾ ಮದುವೆ ನಿಶ್ಚಯವಾಗಿತ್ತು. ಆದರೆ ಮದುವೆಯ ಮನೆಯಿಂದ ನೇರ ಆಸ್ಪತ್ರೆಗೆ ಹೋಗಿದ್ದ ಚೈತ್ರಾ. ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದರು.
ಬಳಿಕ ಕುಟುಂಬಸ್ಥರು ಚೈತ್ರಾಳ ಅಂಗಾಂಗ ದಾನ ಮಾಡಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು