ರಾಜ್ಯದ ಹಲವೆಡೆ ದಿನವಿಡೀ ಸುರಿಯುತ್ತಿರುವ ಮಳೆಗೆ ಭಾರೀ ಅನಾಹುತವೇ ಸೃಷ್ಟಿಯಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಸಂಕಷ್ಟ ಎದುರಾಗಿದೆ. ಮಂಡ್ಯದ ಇಂಡುವಾಳು ಬಳಿ ಸೇತುವೆಯೇ ಕುಸಿದು ವಾಹನ ಸವಾರರು ಪರದಾಡುವಂತೆ ಆಗಿದೆ.
ನಿನ್ನೆಯಿಂದ ಸುರಿಯುತ್ತಿರುವ ಮಳೆಗೆ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಅಡ್ಡಲಾಗಿ ನಿರ್ಮಿಸಿದ್ದ ಮಂಡ್ಯದ ಇಂಡುವಾಳು ಬಳಿ ಸೇತುವೆ ಕೊಚ್ಚಿಹೋಗಿದೆ. ಹಳ್ಳದಲ್ಲಿ ನೀರು ಹೆಚ್ಚಾದ ಕಾರಣದಿಂದ ಸೇತುವೆ ಕೊಚ್ಚಿಹೋಗಿದ್ದು, ಇದರಿಂದ ಟ್ರಾಫಿಕ್ ಜಾಮ್ ಉಂಟಾಗಿದೆ. ಬೆಂಗಳೂರಿನಿಂದ ಮೈಸೂರಿಗೆ ಬರುತ್ತಿರುವ ವಾಹನ ಸವಾರರು ಹೈರಾಣಾಗಿದ್ದಾರೆ. ಟ್ರಾಫಿಕ್ ಕ್ಲಿಯರ್ ಮಾಡಲು ಪೊಲೀಸರು ಹರಸಾಹಸ ಪಡುತ್ತಿದ್ದು.ಮಳೆ ಹೆಚ್ಚಾದ್ರೆ ಹೆದ್ದಾರಿ ಇನ್ನಷ್ಟು ಕುಸಿಯುವ ಆತಂಕ ವ್ಯಕ್ತವಾಗಿದೆ.
ಮಂಡ್ಯದ ಕೆರೆ ಅಂಗಳ ಸಂಪೂರ್ಣ ಜಲಾವೃತಗೊಂಡಿದ್ದು, 1000 ಕ್ಕೂ ಹೆಚ್ಚು ಮನೆಗಳಿರುವ ಕಾಲೋನಿ ರಾತ್ರಿಯಿಡೀ ನೀರಿನಿಂದ ಜಲಾವೃತಗೊಂಡಿದೆ. ಊಟ, ನಿದ್ದೆ ಇಲ್ಲದೇ ಕಂಗಾಲದ ಮಕ್ಕಳು, ವೃದ್ಧರು.ಸಂಕಷ್ಟದಲ್ಲಿದ್ದಾರೆ. ಸದ್ಯ ಜನಪ್ರತಿನಿಧಿಗಳ ನೆರವಿಗೆ ಇಲ್ಲಿನ ಜನರು ಕಾಯುತ್ತಿದ್ದಾರೆ.
More Stories
ವಿಮಾನ ಪತನ: ಕೊನೆಯ ಕ್ಷಣದಲ್ಲಿ ಲ್ಯಾಂಡಿಂಗ್ ಗೇರ್ ವೈಫಲ್ಯ; 179 ಮಂದಿ ದುರ್ಮರಣ!
2025ನೇ ಸಾಲಿನ ರೈಲ್ವೆ ಗ್ರೂಪ್-ಡಿ ಹುದ್ದೆಗಳಿಗೆ 32,000ಕ್ಕೂ ಹೆಚ್ಚು ನೇಮಕಾತಿ
ವಿಚಾರ ಕ್ರಾಂತಿಯ ಯುಗಪುರುಷ ಕುವೆಂಪು