ಜಿಲ್ಲೆಯ ದೇವಗಿರಿ ಗ್ರಾಮದ ಬಳಿ ಇರುವ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಅಪಘಾತ ನಡೆದಿದೆ.
ರಸ್ತೆ ಅಪಘಾತದಲ್ಲಿ ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ದೇವಗಿರಿ ಗ್ರಾಮದ ಬಳಿ ಇರುವ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಜರುಗಿದೆ.
ಬೆಂಗಳೂರಿನಿಂದ ಗೋಕಾಕ್ಗೆ ತೆರಳುತ್ತಿದ್ದ ವಿಆರ್ಎಲ್ ಬಸ್ಸೊಂದು ಬ್ರಿಡ್ಜ್ ಮೇಲಿಂದ ಸರ್ವೀಸ್ ರಸ್ತೆಗೆ ಪಲ್ಟಿಯಾಗಿದೆ.
ಈ ಅಪಘಾತದಲ್ಲಿ ಬಸ್ ಚಾಲಕ ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದ ಹದಿನೈದು ಜನರಿಗೆ ತೀವ್ರಗಾಯಗಳಾಗಿದ್ದು, ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿಗಳು ಸೇರಿ ಕ್ರೇನ್ ಸಹಾಯದಿಂದ ಬಸ್ಸ್ ಮೇಲಕ್ಕೆತ್ತಲಾಗಿದೆ.
ಘಟನೆ ಕುರಿತು ಪರಿಶೀಲಿಸಲು ಡಿವೈಎಸ್ಪಿ ಶಂಕರ ಮಾರಿಹಾಳ, ಸಿಪಿಐ ನಾಗಮ್ಮ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಘಟನೆ ಕುರಿತು ಹಾವೇರಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
- SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
- ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
- ತುಪ್ಪ ಎಂಬ ಮಹಾ ಔಷಧಿ
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
More Stories
ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
ಮುದ್ದುಲಕ್ಷ್ಮಿ ಸೀರಿಯಲ್ ನಟ ಚರಿತ್ ಬಾಳಪ್ಪ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನ
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ: ಬೆಂಗಳೂರು ಸೇರಿ 21 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ