January 10, 2025

Newsnap Kannada

The World at your finger tips!

eshwarappaa

Image source : google

ಪ್ರಾಣಬಿಟ್ಟವರ ಆತ್ಮಕ್ಕೆ ಶಾಂತಿ ತನ್ನಿ: ಈಶ್ವರಪ್ಪ

Spread the love

ಬಹಳಷ್ಟು ಜನ ಪ್ರಾಣಬಿಟ್ಟು ಭಾರತೀಯ ಜನತಾ ಪಕ್ಷವನ್ನು ಕಟ್ಟಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗುವಂತೆ ನಡೆದುಕೊಳ್ಳಬೇಕಾಗಿದೆ ಎಂದು, ಪಕ್ಷಕ್ಕೆ ಮತ್ತು ಮುಖಂಡರಿಗೆ ಮುಜುಗರ ಉಂಟುಮಾಡುವವರಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಕಿವಿಮಾತು ಹೇಳಿದ್ದಾರೆ.


ಪಕ್ಷ ಹಾಗೂ ಸಂಘಟನೆ ಕುರಿತು ಮಾತುಗಳನ್ನು ಆಡುವ ಶಾಸಕರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಶಿವಮೊಗ್ಗದಲ್ಲಿ ಇಂದು ಸಚಿವರು, ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರ ಹೆಸರನ್ನು ಪ್ರಸ್ತಾಪಿಸಿದೆ ಪರೋಕ್ಷವಾಗಿ ಮಾತಿನಪೆಟ್ಟು ನೀಡಿದ್ದಾರೆ.

ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ವಿಶ್ವನಾಥ್, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಇತರ ಮುಖಂಡರನ್ನು ಕಟುವಾಗಿ ಟೀಕಿಸುತ್ತಿರುವ ಬಗ್ಗೆ ಈ ರೀತಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಾರಿಯಲ್ಲಿ ನಿಂತುಕೊAಡು ಹೇಳಿಕೆ ನೀಡಿದರೆ ಮಂತ್ರಿಯಾಗುತ್ತೇವೆ ಎಂಬ ಭ್ರಮೆಯಲ್ಲಿ ಕೆಲವರಿದ್ದಾರೆ ಎಂದು ಕುಟುಕಿದ್ದಾರೆ. ಮಾತಾಡಲು ಸ್ವಾತಂತ್ರö್ಯವಿದೆ ಎಂದು ಏನುಬೇಕಾದರೂ ಹೇಳಲು ನಮ್ಮ ಪಕ್ಷದಲ್ಲಿ ಅವಕಾಶ ಇಲ್ಲ ಎಂದು ಎಚ್ಚರಿಸಿದ್ದಾರೆ.

ಮಂತ್ರಿ ಆಗಲಿಲ್ಲ ಎನ್ನುವವರು ನೀಡುವ ಹೇಳಿಕೆಗಳು ಪಕ್ಷದ ಕಾರ್ಯಕರ್ತರ ಮನಸ್ಸಿಗೆ ನೋವು ತರಬಾರದು. ಯಾರು ಮಂತ್ರಿ ಆಗಬೇಕು. ಯಾರನ್ನು ಮಾಡಬಾರದು ಎಂಬುದನ್ನು ಪಕ್ಷ ತೀರ್ಮಾನಿಸುತ್ತದೆ ಎಂದು ಹೇಳಿದರು.


ರಾಜ್ಯದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಸಿಗದ ಪರಿಣಾಮ ಗೊಂದಲ ಉಂಟಾಗಿದ್ದನ್ನು ಇಲ್ಲ ಎಂದು ಹೇಳಲಾಗದು. ಇದನ್ನು ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿಗಳು ಸರಿಪಡಿಸುತ್ತಾರೆ ಎಂದು ತಿಳಿಸಿದ ಈಶ್ವರಪ್ಪ, ರಾಜ್ಯದಲ್ಲಿ ಮತದಾರರು ಪಕ್ಷಕ್ಕೆ ಬಹುಮತ ಕೊಡದಿರುವುದು ಒಂದು ದುರಂತ ಎಂದು ಬಣ್ಣಿಸಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಜತೆ ನಾವಿದ್ದೇವೆ ಎಂಬುದನ್ನು ರಾಜ್ಯದ ಜನತೆ ತೋರಿಸುತ್ತಿದ್ದಾರೆ ಎಂದೂ ಇದೇ ಸಂದರ್ಭದಲ್ಲಿ ಹೆಮ್ಮೆಯಿಂದ ನುಡಿದರು.

Copyright © All rights reserved Newsnap | Newsever by AF themes.
error: Content is protected !!