PSI ನೇಮಕಾತಿ ಹಗರಣದಲ್ಲಿ ತಮ್ಮನ ಬಂಧನವಾದ ನಂತರ ನೊಂದುಕೊಂಡ ಅಣ್ಣ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದಲ್ಲಿ ಜರುಗಿದೆ. ಹಾಸನದ ಗುಂಜೇವು ಗ್ರಾಮದ ಮನುಕುಮಾರ್ ಎಂಬಾತ ಪಿಎಸ್ಐ ಪರೀಕ್ಷೆ ಬರೆದು ಆಯ್ಕೆಯಾಗಿದ್ದ.
ನೇಮಕಾತಿ ಅಕ್ರಮ ಬೆಳಕಿಗೆ ಬರುತ್ತಿದ್ದಂತೆ ಪಿಎಸ್ಐ ಅಭ್ಯರ್ಥಿಗಳನ್ನು ವಿಚಾರಣೆ ನಡೆಸಿದ್ದ ಸಿಐಡಿ ಪೊಲೀಸರು ಕೆಲವರನ್ನು ಬಂಧನ ಮಾಡಿದ್ದರು.ಈ ಹಂತದಲ್ಲಿ ಸಿಐಡಿ ಅಧಿಕಾರಿಗಳು ಅಭ್ಯರ್ಥಿ ಮನುಕುಮಾರ್ನನ್ನೂ ಬಂಧಿಸಿದ್ದರು. ಪ್ರಕರಣದಲ್ಲಿ ತಮ್ಮನ ಬಂಧನವಾಗುತ್ತಿದ್ದಂತೆ ಅಣ್ಣ ವಾಸು ತುಂಬಾ ನೊಂದುಕೊಂಡಿದ್ದ ಎನ್ನಲಾಗಿದೆ.
ಇದನ್ನು ಓದಿ :PSI ನೇಮಕಾತಿ ಅಕ್ರಮ: ನಾಗಮಂಗಲ ಯೂತ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಶರತ್ ಬಂಧನ
ತಮ್ಮನನ್ನು ಪಿಎಸ್ಐ ಮಾಡಲು ವಾಸು ಸಾಲ ಮಾಡಿ ಹಣ ಕೊಟ್ಟಿರುವ ಶಂಕೆಯೂ ಇದೆ, ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗುತ್ತಿದೆ. ಮತ್ತೊಂದು ಕಡೆ ವಾಸುನ ಅಂತಿಮ ದರ್ಶನಕ್ಕೆ ಮನುಕುಮಾರ್ನನ್ನು ಕರೆದೊಯ್ಯಲು ಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ. ಸದ್ಯ ಮನುಕುಮಾರ್ ಸಿಐಡಿ ಕಸ್ಟಡಿಯಲ್ಲಿದ್ದಾನೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ