ಹುಮ್ನಾಬಾದ್ ತಹಶೀಲ್ದಾರ್ ಕಚೇರಿಯಲ್ಲಿ ಧ್ವಂಸ ಹಾಗೂ ತಹಶೀಲ್ದಾರ್‌ಗೆ ಕಾಲಿನಿಂದ ಒದ್ದು ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಸ್‍ಪಿ ಮುಖಂಡ ಸೇರಿ ಐವರು ಆರೋಪಿಗಳನ್ನು ಹುಮ್ನಾಬಾದ್ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಮನವಿ ಸ್ವೀಕಾರ ವಿಚಾರದಲ್ಲಿ ತಹಶೀಲ್ದಾರ್ ಪ್ರದೀಪ್ ಕುಮಾರ್ ಹಿರೇಮಠ ಮೇಲೆ ಹಲ್ಲೆ ಮಾಡಿದ ಸಂಬಂಧ ಇದೀಗ ಬಿಎಸ್‍ಪಿ ಮುಖಂಡ ಅಂಕುಶ್ ಗೋಖಲೆ, ಜಮೀಲ್ ಖಾನ್, ರಾಜಕುಮಾರ್ ಶಿಂಧೆ, ದೇವಿಂದ್ರ, ಗೌತಮ್ ಸೇರಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ತಹಶೀಲ್ದಾರ್ ಪ್ರದೀಪ್ ಕುಮಾರ್ ಹಿರೇಮಠಗೆ ಹಲ್ಲೆ ನಡೆಸಿ, ಕಚೇರಿಯ ಚೇರ್‌ಗಳನ್ನು ಧ್ವಂಸ ಮಾಡಿ ತಹಶೀಲ್ದಾರ್‌ಗೆ ಅವಾಚ್ಯ ಶಬ್ದಗಳಿಂದ ನಿಂಧನೆ ಮಾಡಿದ ಘಟನೆ ನಿನ್ನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದಲ್ಲಿ ನಡೆದಿತ್ತು.
ಹಲ್ಲೆಯಾಗುತ್ತಿದ್ದಂತೆ ಪ್ರದೀಪ್ ಕುಮಾರ್ ಹಿರೇಮಠ, ಹುಮ್ನಾಬಾದ್ ಠಾಣೆಯಲ್ಲಿ ಹಲ್ಲೆ ಪ್ರಕರಣ ದಾಖಲಿಸಿದ್ದರು.
ಇದಕ್ಕೆ ಪ್ರತಿ ದೂರಾಗಿ ಬಿಎಸ್‍ಪಿ ಮುಖಂಡರು ಕೂಡಾ ತಹಶೀಲ್ದಾರ್ ಮೇಲೆ ಜಾತಿ ನಿಂದನೆ ಕೇಸ್ ದಾಖಲಿಸಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು