December 22, 2024

Newsnap Kannada

The World at your finger tips!

1d81327e 03c6 43e7 b598 44c1ef87632a

ಮಲೆ ಮಹದೇಶ್ವರ ಮೊರೆ ಹೋದ ಬಿಎಸ್‌ವೈ, ತುಂತುರು ಮಳೆಯಲ್ಲೇ ದೇವರ ದರ್ಶನ

Spread the love

ಸಂಪುಟ ವಿಸ್ತರಣೆ ವಿಳಂಬ, ನಾಯಕತ್ವ ಬದಲಾವಣೆ ಗೊಂದಲದ ನಡುವೆಯೂ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಇಂದು ಮಲೆ ಮಹದೇಶ್ವರ ದರ್ಶನ ಪಡೆದಿದ್ದಾರೆ. 

ಮೈಸೂರು ಹಾಗೂ ಚಾಮರಾಜನಗರ ಪ್ರವಾಸದಲ್ಲಿರುವ ಸಿಎಂ ಬಿಎಸ್ ಯಡಿಯೂರಪ್ಪ ಇಂದು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ ಮಲೆ ಮಹದೇಶ್ವರ ದರ್ಶನ ಪಡೆದಿದ್ದಾರೆ.

ನಿವಾರ್ ಚಂಡಮಾರುತದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ತುಂತುರು ಮಳೆ ಸುರಿಯುತ್ತಿದೆ. ತುಂತುರು ಮಳೆಯ ನಡುವೆ ಬಿಎಸ್‌ವೈ ಮಹದೇಶ್ವರ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ಜೊತೆಗೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಹಮ್ಮಿಕೊಂಡಿರುವ ಅಭಿವೃದ್ದಿ ಕಾರ್ಯಕ್ರಮಗಳಿಗೆ ಬಿಎಸ್ ಯಡಿಯೂರಪ್ಪ ಚಾಲನೆ ನೀಡಿದ್ದಾರೆ.

ಬಿಎಸ್‌ ಯಡಿಯೂರಪ್ಪ ಬುಧವಾರ ಮೈಸೂರು ಜಿಲ್ಲೆಯ ಪ್ರವಾಸ ಕೈಗೊಂಡಿದ್ದರು.ಜಿಲ್ಲೆಯಲ್ಲಿ ವಿವಿಧ ಅಭಿವೃದ್ದಿ ಕಾರ್ಯಗಳಿಗೆ ಚಾಲನೆ ನೀಡಿದ್ದರು. ಇದಾದ ಬಳಿಕ ಗುರುವಾರ ಚಾಮರಾಜನಗರ ಪ್ರವಾಸ ಕೈಗೊಂಡಿದ್ದಾರೆ. ಜಿಲ್ಲೆಯಲ್ಲಿ ಅಭಿವೃದ್ದಿ ಕಾರ್ಯಕ್ರಮಗಳಿಗೆ ಸಿಎಂ ಚಾಲನೆ ನೀಡಲಿದ್ದಾರೆ. 

Copyright © All rights reserved Newsnap | Newsever by AF themes.
error: Content is protected !!