ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಚರ್ಚೆ ನಡೆಸಲು ಮುಖ್ಯಮಂತ್ರಿ ಯಡಿಯೂರಪ್ಪನವರು ಇಂದು ದೆಹಲಿಗೆ ತೆರಳಿದ್ದಾರೆ. ಎರಡು ದಿನಗಳ ಕಾಲ ಬಿಡಾರ ಹೂಡಲಿದ್ದಾರೆ.
ದೆಹಲಿಯಲ್ಲಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮದರೊಂದಿಗೆ ಮಾತನಾಡಿ ‘ರಾಜ್ಯದ ಸಮಸ್ಯೆಗಳು, ಅಭಿವೃದ್ಧಿ ಕಾರ್ಯಗಳು, ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಕೇಂದ್ರ ಸಚಿವರು ಹಾಗೂ ಪಕ್ಷದ ನಾಯಕರೊಂದಿಗೆ ಚರ್ಚಿಸಲು ದೆಹಲಿಗೆ ಬಂದಿದ್ದೇನೆ’ ಎಂದು ಹೇಳಿದರು.
ಪ್ರಧಾನಿ ಮೋದಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ತಮ್ಮ ಎರಡು ದಿನಗಳ ಭೇಟಿಯಲ್ಲಿ ಭೇಟಿ ಮಾಡುವುದಾಗಿ ಹೇಳಿದರು.
೬ ತಿಂಗಳ ನಂತರ ಯಡಿಯೂರಪ್ಪನವರು ದೆಹಲಿ ಪ್ರಯಾಣ ಕೈಗೊಂಡಿದ್ದಾರೆ.
More Stories
ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಮದುವೆ ಸಹಾಯಧನ: ₹60,000 ಪಡೆಯಲು ಅರ್ಜಿ ಆಹ್ವಾನ!
ಮಾದಕ ವಸ್ತುಗಳ ಅಕ್ರಮ ಮಾರಾಟ: ಮೂವರು ಆರೋಪಿಗಳು ಬಂಧನ
ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ: ಆದಾಯಕ್ಕಿಂತ ಅಧಿಕ ಆಸ್ತಿ ಆರೋಪ