ಮಂಡ್ಯ ತಾಲ್ಲೂಕು ಬೂದನೂರು ಉತ್ಸವವನ್ನು ಮಾಚ್೯ 2 ಹಾಗೂ 3 ರಂದು ಹಮ್ಮಿಕೊಳ್ಳಲಾಗುವುದು ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೇದಿಕೆ, ಆಹಾರ, ಸ್ವಾಗತ, ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಕಾರ್ಯಕ್ರಮಗಳು ಉತ್ತಮವಾಗಿ ಸಂಘಟಿಸಲು ಕಾರ್ಯ ಪ್ರವೃತ್ತರಾಗಬೇಕು ಎಂದರು.
ಕಾರ್ಯಕ್ರಮ ನಡೆಯುವ ಸ್ಥಳ ಹಾಗೂ ಸುತ್ತಮುತ್ತಲಿನ ಪ್ರದೇಶದ ಸ್ವಚ್ಛತೆ ಕೆಲಸಗಳು ಪ್ರಾರಂಭವಾಗಬೇಕು. ಸಣ್ಣ ಪುಟ್ಟ ರಸ್ತೆ ದುರಸ್ತಿ ಕೆಲಸಗಳಿದ್ದಲ್ಲಿ ಅವುಗಳನ್ನು ಶೀಘ್ರವಾಗಿ ಪ್ರಾರಂಭಿಸಿ ಪೂರ್ಣಗೊಳಿಸಬೇಕು ಎಂದರು.
ವಾಹನಗಳ ನಿಲುಗಡೆ ಪ್ರದೇಶವನ್ನು ಸಮತಟ್ಟು ಮಾಡಿ ವಿದ್ಯುತ್ ದೀಪಗಳ ವ್ಯವಸ್ಥೆ ಮಾಡಿ. ಕಾರ್ಯಕ್ರಮ ನಡೆಯುವ ಸ್ಥಳ ಹಾಗೂ ಅವಶ್ಯಕತೆ ಇರುವ ಪ್ರದೇಶಗಳಲ್ಲಿ ಸಿ.ಸಿ.ಟಿ.ವಿ ವ್ಯವಸ್ಥೆ ಮಾಡಿಕೊಳ್ಳಿ ಎಂದರು.
ಇದೇ ಮೊದಲ ಬಾರಿಗೆ ಗ್ರಾಮ ಮಟ್ಟದಲ್ಲಿ ಉತ್ಸವ ಆಯೋಜನೆ ಮಾಡಲಾಗುತ್ತಿದ್ದು, ಕುಡಿಯುವ ನೀರು ಹಾಗೂ ತಾತ್ಕಾಲಿಕ ಶೌಚಾಲಯದ ವ್ಯವಸ್ಥೆ ಮಾಡುವಂತೆ ತಿಳಿಸಿದರು.
ಆಹಾರ ಮೇಳ ಎಲ್ಲಾ ಜಿಲ್ಲೆಗಳ ವಿಶೇಷತೆಯುಳ್ಳ ವಿವಿಧ ಆಹಾರ ಖಾದ್ಯ ತಯಾರಿಸುವ ಆಹಾರ ಮೇಳವನ್ನು ಆಯೋಜಿಸಿ ಮಳಿಗೆಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಿ ಎಂದರು.ರಾಜ್ಯ ಸರ್ಕಾರಿ ನೌಕರರಿಗೆ ಫೆ.27, 28ರಂದು ವಿಶೇಷ ಸಾಂದರ್ಭಿಕ ರಜೆ
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವಿರ್ ಆಸಿಫ್, ಅಪರ ಜಿಲ್ಲಾಧಿಕಾರಿ ಡಾ: ಹೆಚ್.ಎಲ್ ನಾಗರಾಜು, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ರಾಘವೇಂದ್ರ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
More Stories
ಭೂಕಂಪದ : ಟಿಬೆಟ್-ನೇಪಾಳ ಗಡಿಯಲ್ಲಿ 32 ಮಂದಿ ಸಾವು, 38 ಮಂದಿ ಗಾಯ
ಭಾರತೀಯ ವಾಯುಪಡೆ: ಏರ್ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಅಮಿತ್ ಶಾ ಹೇಳಿಕೆ ವಿರೋಧಿಸಿ ಮೈಸೂರು-ಮಂಡ್ಯ ಬಂದ್: ವಾಹನ ಸಂಚಾರಕ್ಕೆ ಅಡಚಣೆ