March 6, 2025

Newsnap Kannada

The World at your finger tips!

Bangalore airport

ಕೇಂದ್ರ Budget 2025 : 120 ಹೊಸ ವಿಮಾನ ನಿಲ್ದಾಣಗಳ ಸ್ಥಾಪನೆ, ಪ್ರಯಾಣಿಕರಿಗೆ ಸುಲಭ ಸಂಚಾರ

Spread the love

ಬೆಂಗಳೂರು, ಫೆಬ್ರವರಿ 01: ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ 2025-26ನೇ ಸಾಲಿನ ಬಜೆಟ್ ಭಾಷಣದಲ್ಲಿ 120 ಹೊಸ ವಿಮಾನ ನಿಲ್ದಾಣಗಳನ್ನು ಸ್ಥಾಪಿಸುವ ಯೋಜನೆ ಘೋಷಿಸಿದ್ದಾರೆ.

ಮುಂದಿನ 10 ವರ್ಷಗಳಲ್ಲಿ 4 ಕೋಟಿ ಹೆಚ್ಚುವರಿ ಪ್ರಯಾಣಿಕರನ್ನು ಗುರಿಯಾಗಿಸಿ ಈ ಏರ್‌ಪೋರ್ಟ್‌ಗಳನ್ನು ನಿರ್ಮಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಬಜೆಟ್ ಭಾಷಣದಲ್ಲಿ ಬಿಹಾರದಲ್ಲಿ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗುವುದು ಎಂದು ಘೋಷಿಸಲಾಗಿದೆ.

ಈ ಹೊಸ ವಿಮಾನ ನಿಲ್ದಾಣಗಳ ಮೂಲಕ ಅಂತಾರಾಷ್ಟ್ರೀಯ ಮತ್ತು ದೇಶೀಯ ವಿಮಾನ ಸಂಚಾರ ಸುಗಮಗೊಳ್ಳಲಿದ್ದು, ಹಳೆಯ ವಿಮಾನ ನಿಲ್ದಾಣಗಳ ಮೇಲ್ದರ್ಜೆಗೇರಿಸುವ ಯೋಜನೆಗಳೂ ಅನುಷ್ಟಾನಗೊಳ್ಳಲಿವೆ.ಇದನ್ನು ಓದಿ –36 ಜೀವರಕ್ಷಕ ಔಷಧಿಗಳಿಗೆ ಕಸ್ಟಮ್ಸ್ ಸುಂಕ ವಿನಾಯಿತಿ

ಕೇಂದ್ರ ಸರ್ಕಾರ ಈಗಾಗಲೇ ಉಡಾನ್ ಯೋಜನೆ ಜಾರಿಗೊಳಿಸಿದ್ದು, ಹೊಸ ಉಡಾನ್ ಯೋಜನೆಯನ್ನು ಸಹ ಜಾರಿಗೆ ತರಲಾಗುವುದು ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಇದರಡಿ ಎರಡನೇ ಮತ್ತು ಮೂರನೇ ಹಂತದ ನಗರಗಳಿಗೆ ಸಹ ವಿಮಾನ ಸೇವೆ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತದೆ.

Copyright © All rights reserved Newsnap | Newsever by AF themes.
error: Content is protected !!