January 3, 2025

Newsnap Kannada

The World at your finger tips!

yediyurappa

ಕಲ್ಯಾಣ ಕರ್ನಾಟಕ ಭಾಗದಲ್ಲಿ 10 ಸಾವಿರ ಶಾಲಾ ಶಿಕ್ಷಕರ ನೇಮಕಕ್ಕೆ ಬಜೆಟ್ ನಲ್ಲಿ ಪ್ರಸ್ತಾವನೆ

Spread the love

ಕಲ್ಯಾಣ ಕರ್ನಾಟಕ ಭಾಗದ ಶಾಲೆ ಗಳಲ್ಲಿ 10 ಸಾವಿರ ಶಾಲಾ ಶಿಕ್ಷಕರ ನೇಮಕದ ಪ್ರಸ್ತಾವವನ್ನು ಮುಂದಿನ ಬಜೆಟ್‌ನಲ್ಲಿ ಸೇರಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆಯುವ ಮುಂದಿನ ವರ್ಷದ ಬಜೆಟ್ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ಪ್ರಸ್ತಾವಗಳನ್ನು ಸಲ್ಲಿಸಲು ತೀರ್ಮಾನಿಸಲಾಗಿದೆ.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್ ಸುರೇಶ್ ‌ಕುಮಾರ್ ಇಲಾಖೆಯ ಅಧಿಕಾರಿಗಳೊಂದಿಗೆ ನಗರದಲ್ಲಿ ನಡೆಸಿದ ಬಜೆಟ್‌ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆಯ 5 ಪ್ರಸ್ತಾವಗಳು ಹೀಗಿವೆ
  • ಕಲ್ಯಾಣ ಕರ್ನಾಟಕ ಭಾಗದಲ್ಲಿ 8 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು 2 ಸಾವಿರ ಪ್ರೌಢ ಶಾಲಾ ಶಿಕ್ಷಕರ ನೇಮಕಾತಿ
  • ಒಂದು ಸಾವಿರ ಶಾಲೆಗಳನ್ನು ಉಭಯ ಮಾಧ್ಯಮ ಶಾಲೆಗಳಾಗಿ ಪರಿವರ್ತಿಸುವುದು
  • ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಅಳವಡಿಸಿಕೊಳ್ಳುವ ಸಲುವಾಗಿ ʼರಾಜ್ಯ ಶಾಲಾ ಶಿಕ್ಷಣ ಆಯೋಗʼ ಎಂಬ ಸ್ವಾಯತ್ತ ಸಂಸ್ಥೆ ಸ್ಥಾಪನೆ
  • 1995ರಿಂದ 2000ದವರೆಗೆ ಪ್ರಾರಂಭಗೊಂಡ ಕನ್ನಡ ಮಾಧ್ಯಮದ ಅನುದಾನ ರಹಿತ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವುದು
  • ರಾಜ್ಯದ 25 ಗ್ರಾಮ ಪಂಚಾಯತಿಗಳು ಮತ್ತು ಬಿಬಿಎಂಪಿ ವ್ಯಾಪ್ತಿಯ 25 ವಾರ್ಡುಗಳಲ್ಲಿ ಕೇಂದ್ರೀಯ ವಿದ್ಯಾಲಯ ಮಾದರಿಯಲ್ಲಿ 5ರಿಂದ 12ನೇ ತರಗತಿ ಮಕ್ಕಳ ವಿದ್ಯಾಭ್ಯಾಸಕ್ಕೆ ಪಂಚಾಯಿತಿ ಅಥವಾ ವಾರ್ಡ್ ಪಬ್ಲಿಕ್ ಶಾಲೆಗಳನ್ನು ಆರಂಭಿಸುವುದು.
Copyright © All rights reserved Newsnap | Newsever by AF themes.
error: Content is protected !!