ವಿಧಾನಸಭಾ ಚುನಾವಣೆಗಳ ಮೇಲೆ ಕೇಂದ್ರದ ಕಣ್ಣು – ರಾಷ್ಟ್ರೀಯ ಹೆದ್ದಾರಿ ರಸ್ತೆ ಗಳಿಗೆ ಸಾಕಷ್ಟು ಅನುದಾನ

Team Newsnap
1 Min Read

ಕೆಲವು‌ ರಾಜ್ಯಗಳ ವಿಧಾನ ಸಭಾ ಚುನಾವಣೆಗಳ ಮೇಲೆ ಕಣ್ಣಿಟ್ಟಿರುವ ಕೇಂದ್ರ, ಆ ರಾಜ್ಯಗಳಲ್ಲಿ ಮೆಗಾ ರಾಷ್ಟ್ರೀಯ ಹೆದ್ದಾರಿ ನಿರ್ಮಿಸಲು ಸಿದ್ದತೆ ಮಾಡಿದೆ.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ರಾಷ್ಟ್ರೀಯ ಹೆದ್ದಾರಿ ನಿರ್ಮಿಸಲು ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡಿಗೆ ಸಾಕಷ್ಟು ಅನುದಾನವನ್ನು ಪ್ರಕಟಿಸಿದ್ದಾರೆ.

ತಮಿಳುನಾಡಿನಲ್ಲಿ 3,500 ಕಿ.ಮೀ ಕಾರಿಡಾರ್‌, ಕೇರಳಕ್ಕೆ 65 ಸಾವಿರ ಕೋಟಿ ರು, ಪಶ್ಚಿಮ ಬಂಗಾಳಕ್ಕೆ 95 ಸಾವಿರ ಕೋಟಿ ರು., ಅಸ್ಸಾಂನಲ್ಲಿ ಮುಂದಿನ ಮೂರು ವರ್ಷದಲ್ಲಿ 1,300 ಕಿ.ಮೀ ಉದ್ದದ ರಾಷ್ಟ್ರೀಯ ಹೆದ್ದಾರಿ ನಿರ್ಮಿಸಲಾಗುವುದು ಎಂದು ಪ್ರಕಟಿಸಿದ್ದಾರೆ.

ನಿರ್ಮಲಾ ಸೀತಾರಾಮನ್‌ ಯೋಜನೆಗಳನ್ನು ಪ್ರಕಟಿಸುತ್ತಿದ್ದಂತೆ ಈಗ ಇದು ಭಾರೀ ಚರ್ಚೆಗೆ ಕಾರಣವಾಗಿದೆ. ಇದು ಕೇಂದ್ರ ಬಜೆಟ್‌ ಅಲ್ಲ ರಾಜ್ಯಗಳ ಚುನಾವಣಾ ಬಜೆಟ್‌ ಎಂದು ಸಾಮಾಜಿಕ ಜಾಲತಾಣದಲ್ಲಿ ಟೀಕೆಗೂ ಬಂದಿವೆ.

Share This Article
Leave a comment