ಮಹಾರಾಷ್ಟ್ರದಲ್ಲಿ ಬಸ್ ಗೆ ಬೆಂಕಿ : 25 ಮಂದಿ ಸಜೀವ ದಹನ

Team Newsnap
1 Min Read

ಬುಲ್ದಾನ :

ಚಲಿಸುತ್ತಿದ್ದ ಬಸ್ ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ 25 ಮಂದಿ ಸಜೀವ ದಹನವಾಗಿದ್ದಾರೆ. , 8 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಮಹಾರಾಷ್ಟ್ರ ಸಮೃದ್ಧಿ ಮಹಾಮಾರ್ಗ್ ಎಕ್ಸ್​​ಪ್ರೆಸ್ ಹೆದ್ದಾರಿಯಲ್ಲಿ ಶನಿವಾರ ಜರುಗಿದೆ.

ಬುಲ್ಧಾನ ಜಿಲ್ಲೆಯ ಸಿಂಧಖೇದರಾಜ ಬಳಿಯ ಪಿಂಪಲಖುಟಾ ಗ್ರಾಮದ ಬಳಿ ಸಮೃದ್ಧಿ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ.

ಬಸ್ ನಾಗ್ಪುರದಿಂದ ಪುಣೆಗೆ ಹೋಗುತ್ತಿತ್ತು, ಇಂದು ಬೆಳಗಿನ ಜಾವ 2 ಗಂಟೆಗೆ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದೆ.

ಅಪಘಾತಕ್ಕೀಡಾದ ಬಸ್ ವಿದರ್ಭ ಟ್ರಾವೆಲ್ಸ್​ ನದ್ದು ಬಸ್‌ನಲ್ಲಿ ನಾಗ್ಪುರ, ವಾರ್ಧಾ ಮತ್ತು ಯವತ್ಮಾಲ್‌ನಿಂದ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.

ಅಪಘಾತದ ನಂತರ ಬಸ್ಸಿನಿಂದ ಹೆಚ್ಚಿನ ಪ್ರಮಾಣದ ಡೀಸೆಲ್ ರಸ್ತೆಯ ಮೇಲೆ ಸೋರಿಕೆಯಾಗಿದೆ. ಈ ವೇಳೆ ಬಸ್​ನ ಇಂಜಿನ್​ನಲ್ಲಿ ಸ್ಪಾರ್ಕ್​ ಆಗಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಬಸ್‌ನಿಂದ 25 ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಬಸ್ಸಿನಿಂದ ಹೊರತೆಗೆದ ಮೃತದೇಹಗಳನ್ನು ಗುರುತಿಸುವುದು ಕಷ್ಟವಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಬುಲ್ಧಾನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಪೊಲೀಸರು ಮೃತರ ಸಂಬಂಧಿಗಳಿಗೆ ಮಾಹಿತಿ ರವಾನಿಸುವ ಕಾರ್ಯವನ್ನು ಕೈಗೊಂಡಿದ್ದಾರೆ. ಸುದ್ದಿ ತಿಳಿದ ಕುಟುಂಬಸ್ಥರು ಬುಲ್ಧಾನ್​ನ ಸರ್ಕಾರಿ ಆಸ್ಪತ್ರೆಗೆ ದೌಡಾಯಿಸುತ್ತಿದ್ದಾರೆ.

Share This Article
Leave a comment