Karnataka

ಕೆಯುಡಬ್ಲ್ಯುಜೆ ಹೋರಾಟದ ಫಲ ನನಸಾದ ಪತ್ರಕರ್ತರ ಬಸ್ ಪಾಸ್

ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು, ದಶಕಗಳ ಕನಸು ನನಸಾಗಿದೆ.

ದಾವಣಗೆರೆಯಲ್ಲಿ ಇದೇ ಫೆ.3&4 ರಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಭರವಸೆಯನ್ನು ಈಡೇರಿಸಿರುವುದಕ್ಕೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಧನ್ಯವಾದ ಸಲ್ಲಿಸಿದ್ದಾರೆ.

ಮಂಡ್ಯ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿಯೂ ಉಚಿತ ಬಸ್ ಪಾಸ್ ಬಗ್ಗೆ ಕೆಯುಡಬ್ಲ್ಯುಜೆ ಮಂಡಿಸಿದ್ದ ಹಕ್ಕೊತ್ತಾಯ ಬಗ್ಗೆ ಮುಖ್ಯಮಂತ್ರಿಗಳು ಕೊಟ್ಟ ಮಾತಿನಂತೆ ನಡೆದುಕೊಂಡಿರುವುದನ್ನು ಕೆಯುಡಬ್ಲ್ಯುಜೆ ಸ್ಮರಿಸಿದ್ದು, ಅಭಿನಂದನೆ ಸಲ್ಲಿಸಿದೆ.

ಬಸ್ ಪಾಸ್ ಬೇಡಿಕೆ ಈಡೇರಿಸಲು ಸ್ಪಂದಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಎಲ್ಲಾ ಹಂತದಲ್ಲಿಯೂ ಸಹಕಾರ ನೀಡಿದ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೂ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘವು ವಿಶೇಷವಾಗಿ ಸ್ಮರಿಸಿ ಅಭಿನಂದಿಸಿದೆ.ವಿವಿಧ ಇಲಾಖೆಯಲ್ಲಿ ನೇಮಕಾತಿ : ಸಿದ್ದರಾಮಯ್ಯ

ಬಜೆಟ್ ನಲ್ಲಿ ಘೋಷಣೆ ಮಾಡಿರುವ ಬಸ್ ಪಾಸ್ ಯೋಜನೆಯನ್ನು ಕ್ರಮಬದ್ದವಾಗಿ ಕೂಡಲೇ ಜಾರಿಗೆ ತರಲು ವಾರ್ತಾ ಇಲಾಖೆ ಮುಂದಾಗಬೇಕು ಎಂದು ಕೆಯುಡಬ್ಲ್ಯುಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು
ವಿನಂತಿಸಿದ್ದಾರೆ.

Team Newsnap
Leave a Comment

Recent Posts

ಧಾರ್ಮಿಕ ಕಾರ್ಯಕ್ರಮದಲ್ಲಿ ಕಾಲ್ತುಳಿತ : ಸಾವಿನ ಸಂಖ್ಯೆ 60 ಕ್ಕೆ ಏರಿದೆ

ಉತ್ತರ ಪ್ರದೇಶದ ಹತ್ರಾಸ್ನ ರತಿಭಾನ್ಪುರದಲ್ಲಿ ಧಾರ್ಮಿಕ ಕಾರ್ಯಕ್ರಮವೊಂದರ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿದ್ದು ,ಇವರೆಗೂ 60 ಜನರು ಸಾವನ್ನಪ್ಪಿದ್ದಾರೆ. ದುರಂತದಲ್ಲಿ ಮಹಿಳೆಯರು… Read More

July 2, 2024

ಮಗನನ್ನು ಕೊಂದ ಅಳಿಯ : ಮನನೊಂದ ತಾಯಿ ನೇಣಿಗೆ ಶರಣು

ಮೈಸೂರು : ನಗರದ ಕೂರ್ಗಳ್ಳಿಯಲ್ಲಿ ಪುತ್ರನ ಅಗಲಿಕೆ ನೋವಿನಿಂದ ತಾಯಿ ಆತ್ಮಹತ್ಯೆ ಶರಣಾಗಿರುವ ಘಟನೆ ನಡೆದಿದೆ . ಭಾಗ್ಯಮ್ಮ (46)… Read More

July 2, 2024

ವಿಜಯ್ ಮಲ್ಯಗೆ ಜಾಮೀನು ರಹಿತ ಬಂಧನ ವಾರೆಂಟ್

ನವದೆಹಲಿ : ಮುಂಬೈ ಸಿಬಿಐ ವಿಶೇಷ ನ್ಯಾಯಾಲಯ ಉದ್ಯಮಿ ವಿಜಯ್ ಮಲ್ಯ (Vijay Mallya) ವಿರುದ್ಧ ಜಾಮೀನು ರಹಿತ ಬಂಧನ… Read More

July 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಜುಲೈ 02 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More

July 2, 2024

ಕೆ ಆರ್ ಎಸ್ ಗೆ 8 ಸಾವಿರ ಕ್ಯುಸೆಕ್ ಒಳಹರಿವು – 96.50 ಅಡಿ ನೀರು – ಕಬಿನಿಗೆ ಭರ್ತಿಗೆ 6 ಅಡಿ ಬಾಕಿ

ಮೈಸೂರು : ಮಳೆಯ ಪ್ರಮಾಣ ಕಡಿಮೆಯಾಗಿದೆ. ಹೀಗಾಗಿಜಲಾಶಯಗಳ ಒಳ ಹರಿವು ಕೊಂಚ ತಗ್ಗಿದೆ. ಕೆಆರ್ ಎಸ್ ನೀರಿನ ಮಟ್ಟ 96.50… Read More

July 2, 2024

ಅರಮನೆ ನಗರಿ ಮೈಸೂರಿನಲ್ಲಿ ‘ಫಿಲ್ಮ್ ಸಿಟಿ’ ನಿರ್ಮಾಣ : ಸಿಎಂ ಘೋಷಣೆ

ಮೈಸೂರು : ಕರ್ನಾಟಕ ಸರ್ಕಾರವು ಕನ್ನಡ ಚಲನಚಿತ್ರೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮೈಸೂರು ನಗರದಲ್ಲಿ ಅತ್ಯಾಧುನಿಕ ಫಿಲ್ಮ್ ಸಿಟಿಯನ್ನು ನಿರ್ಮಿಸಲು ನಿರ್ಧರಿಸಿದೆ.… Read More

July 1, 2024