ಬೆಂಗಳೂರು: ರಾಜ್ಯದಲ್ಲಿ ನಡೆಯಲಿರುವ ವಿಧಾನಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ನವೆಂಬರ್ 13 ರಂದು ರಾಜ್ಯ ಸರ್ಕಾರವು ಎಲ್ಲಾ ಅರ್ಹ ಮತದಾರರಿಗೆ ವೇತನ ಸಹಿತ ರಜೆಯನ್ನು ಘೋಷಣೆ ಮಾಡುವುದಾಗಿ ಆದೇಶ ಹೊರಡಿಸಿದೆ.
ಆದೇಶದ ವಿವರ:
ನವೆಂಬರ್ 13, 2024, ಬುಧವಾರದಂದು 83-ಶಿಗ್ಗಾಂವ್, 95-ಸಂಡೂರು ಮತ್ತು 185-ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದ್ದು, ಈ ಕ್ಷೇತ್ರಗಳ ವ್ಯಾಪ್ತಿಯ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು (ಅನುದಾನಿತ ಶಿಕ್ಷಣ ಸಂಸ್ಥೆಗಳು ಸೇರಿದಂತೆ), ರಾಷ್ಟ್ರೀಕೃತ ಬ್ಯಾಂಕುಗಳು, ಜೀವವಿಮಾ ನಿಗಮ, ಹಣಕಾಸು ಸಂಸ್ಥೆಗಳು ಹಾಗೂ ವಾಣಿಜ್ಯ, ಕೈಗಾರಿಕಾ ಉದ್ಯಮಗಳಲ್ಲಿ ಖಾಯಂ ಅಥವಾ ದಿನಗೂಲಿ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಎಲ್ಲ ಅರ್ಹ ಮತದಾರರಿಗೆ, ಮತದಾನ ಮಾಡಲು ಅನುಕೂಲವಾಗುವಂತೆ, ಒಂದು ದಿನದ ವೇತನ ಸಹಿತ ರಜೆಯನ್ನು ನಿಗದಿಪಡಿಸಲಾಗಿದೆ.
ಇದನ್ನು ಓದಿ – ಮೈಸೂರಿನ ಸರ್ಕಾರಿ ಶಾಲೆಯ ಜಾಗ ವಕ್ಫ್ ಆಸ್ತಿಯಾಯ್ತು – ಸಿಎಂಗೆ ಪ್ರತಾಪ್ ಸಿಂಹ ಟಾಂಗ್
Negotiable Instrument Act 1881, ಕಲಂ 25 ಮತ್ತು Representation of People Act, 1951, ಕಲಂ 135B ಅಡಿಯಲ್ಲಿ ಈ ರಜೆಯನ್ನು ನೀಡಲು ತಕ್ಕ ಅಧಿಕಾರಿಗಳನ್ನು ಅಧಿಕಾರಪೂರ್ವಕವಾಗಿ ಅನುಮೋದಿಸಲಾಗಿದೆ.
More Stories
₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ
ಮುಡಾ ಹಗರಣ: ಸ್ನೇಹಮಯಿ ಕೃಷ್ಣ ಮತ್ತು ಕೈ ಮುಖಂಡ ಲಕ್ಷ್ಮಣ್ ನಡುವೆ ವಾಗ್ವಾದ
ಯೋಗ ಗುರು ಶರತ್ ಜೋಯಿಸ್ ಹೃದಯಾಘಾತದಿಂದ ನಿಧನ