ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಸಿ.ಟಿ.ರವಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಸಿ.ಟಿ.ರವಿ ಶನಿವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೊದಲು ಸಿ.ಟಿ.ರವಿ ಅವರು ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದರು. ಗಾಂಧಿ ಜಯಂತಿಯಂದು ಸಿಎಂ ಬಿಎಸ್ವೈ ಸಿಗದ ಕಾರಣ ನಿನ್ನೆ ಅಂದರೆ ಶನಿವಾರ ರಾಜೀನಾಮೆ ಕೊಟ್ಟಿದ್ದಾರೆ. ಸಿ.ಟಿ.ರವಿ ಅವರು ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾಗಿದ್ದರು. ನಿನ್ನೆ ಸಿಎಂ ಯಡಿಯೂರಪ್ಪನವರನ್ನು ಭೇಟಿಯಾಗಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ ಸಿ.ಟಿ.ರವಿ ಅವರ ರಾಜೀನಾಮೆಯನ್ನು ಸಿಎಂ ಬಿಎಸ್ವೈ ಇನ್ನೂ ಸಹ ಅಂಗೀಕರಿಸಿಲ್ಲ.
ಇನ್ನು, ನಾಳೆ ಅಂದರೆ ಅ.5ರಂದು ಸಿ.ಟಿ.ರವಿ ಅವರು ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳಲಿದ್ದಾರೆ. ಅಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಸಿ.ಟಿ.ರವಿ ಭೇಟಿ ಮಾಡಲಿದ್ದಾರೆ. ಜೊತೆಗೆ ಅಕ್ಟೋಬರ್ 5 ಮತ್ತು 6ರಂದು ದೆಹಲಿಯಲ್ಲಿ ಪಕ್ಷದ ಸಂಘಟನಾ ಸಭೆ ಇದೆ. ಈ ಸಭೆಯಲ್ಲೂ ಸಹ ಸಿ.ಟಿ.ರವಿ ಅವರು ಪಾಲ್ಗೊಳ್ಳಲಿದ್ದಾರೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ