ನವದೆಹಲಿ: ಕೇಂದ್ರ ಸರ್ಕಾರ ಅಧಿಕೃತವಾ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (CAA) ಜಾರಿಗೊಳಿಸಲು ಮುಂದಾಗಿದೆ.
ಇಂದು ರಾತ್ರಿ ಕೇಂದ್ರ ಗೃಹ ಸಚಿವಾಲಯ ಸಿಎಎ ಜಾರಿ ಸಂಬಂಧ ನಿಯಮಗಳನ್ನು ಪ್ರಕಟಿಸಿ ಅಧಿಸೂಚನೆ ಹೊರಡಿಸಲಿದೆ.
ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಚುನಾವಣೆಯ ಸಂದರ್ಭದಲ್ಲಿ ಸಿಎಎ ಜಾರಿಗೊಳಿಸುತ್ತೇವೆ ಎಂದು ಪ್ರಕಟಿಸಿ , ರಾಷ್ಟ್ರ ಪತಿಗಳು ಕಾಯ್ದೆಗೆ ಸಹಿ ಹಾಕಿದ್ದರೂ ಇಲ್ಲಿಯವರೆಗೆ ಜಾರಿ ಆಗಿರಲಿಲ್ಲ.
ಇದೀಗ ಲೋಕಸಭಾ ಚುನಾವಣೆಗೂ ಮುನ್ನ ಸಿಎಎ ಜಾರಿಗೊಳಿಸುವ ಮೂಲಕ ತನ್ನಲ್ಲಿದ್ದ ದೊಡ್ಡ ಅಸ್ತ್ರವನ್ನು ಬಿಜೆಪಿ ಪ್ರಯೋಗಿಸಿದೆ.
ಗೃಹ ಸಚಿವ ಅಮಿತ್ ಶಾ ಮಾಧ್ಯಮವೊಂದರ ಕಾರ್ಯಕ್ರಮದಲ್ಲಿ ಮಾತನಾಡಿ , ಲೋಕಸಭಾ ಚುನಾವಣೆಗು (Lok Sabha Election) ಮುನ್ನ ಜಾರಿಗೆ ತರುವುದಾಗಿ ಹೇಳಿದ್ದರು.
ದೇಶ ವಿಭಜನೆಯಾದಾಗ ಮತ್ತು ಆ ದೇಶದಲ್ಲಿದ್ದ ಅಲ್ಪಸಂಖ್ಯಾತರು ಕಿರುಕುಳಕ್ಕೊಳಗಾದಾಗ, ನಿರಾಶ್ರಿತರಿಗೆ ಭಾರತದಲ್ಲಿ ಆಶ್ರಯ ನೀಡಿ ಭಾರತೀಯ ಪೌರತ್ವವನ್ನು ನೀಡಲಾಗುವುದು ಎಂದು ಕಾಂಗ್ರೆಸ್ ಭರವಸೆ ನೀಡಿತ್ತು.ಆದರೆ ಕಾಂಗ್ರೆಸ್ ಆ ಭರವಸೆಯಿಂದ ಹಿಂದಕ್ಕೆ ಸರಿಯುತ್ತಿದೆ ಎಂದು ಅಮಿತ್ ಶಾ ವ್ಯಕ್ತಪಡಿಸಿದ್ದಾರೆ.
ದೇಶದಲ್ಲಿ ಅಲ್ಪಸಂಖ್ಯಾತರು ಮತ್ತು ವಿಶೇಷವಾಗಿ ನಮ್ಮ ಮುಸ್ಲಿಂ ಸಮುದಾಯವನ್ನು ಪ್ರಚೋದಿಸಲಾಗುತ್ತಿದೆ. ಕಾಯ್ದೆಯಲ್ಲಿ ಯಾವುದೇ ನಿಬಂಧನೆ ಇಲ್ಲದ ಕಾರಣ ಸಿಎಎ ಯಾರ ಪೌರತ್ವವನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ.
ಸಿಎಎ ಬಾಂಗ್ಲಾದೇಶ ಮತ್ತು ಪಾಕಿಸ್ತಾನದಲ್ಲಿ ಕಿರುಕುಳಕ್ಕೊಳಗಾದ ನಿರಾಶ್ರಿತರಿಗೆ ಪೌರತ್ವ ನೀಡುವ ಕಾಯ್ದೆಯಾಗಿದೆ ಎಂದು ವಿವರಿಸಿದ್ದಾರೆ.
ರಾಷ್ಟ್ರಪತಿಗಳು 2019ರಲ್ಲಿ ಪೌರತ್ವ ತಿದ್ದುಪಡಿ ಮಸೂದೆಗೆ ಸಹಿ ಹಾಕಿದ ನಂತರ ದೇಶದಲ್ಲಿ ಭಾರೀ ಪ್ರತಿಭಟನೆ ನಡೆದ ಕಾರಣ ಇನ್ನೂ ಸಿಎಎ ಜಾರಿಯಾಗಿಲ್ಲ.ರಾಜ್ಯದಲ್ಲಿ ಕಾಟನ್ ಕ್ಯಾಂಡಿ ಬ್ಯಾನ್- ಕೃತಕ ಬಣ್ಣ ಗೋಬಿಗೆ ಬಳಸುವಂತಿಲ್ಲ
ಈ ಕಾಯ್ದೆಯ ಪ್ರಕಾರ ಅಫ್ಘಾನಿಸ್ತಾನ, ಪಾಕಿಸ್ತಾನ, ಬಾಂಗ್ಲಾದೇಶಗಳಿಂದ ಬರುವ ಹಿಂದೂ, ಸಿಖ್, ಜೈನ್, ಕ್ರೈಸ್ತ ಮತ್ತು ಬೌದ್ಧ ಸಮುದಾಯದವರಿಗೆ ಭಾರತದ ಪೌರತ್ವ ನೀಡಲಾಗುತ್ತದೆ.
More Stories
MUDA ಹಗರಣ: ನಾಳೆ ಬೆಳಿಗ್ಗೆ 10 ಗಂಟೆಗೆ ಲೋಕಾಯುಕ್ತ ವಿಚಾರಣೆಗೆ ಹಾಜರಾಗಲು ಸಿಎಂ ಸಿದ್ದರಾಮಯ್ಯ ನಿರ್ಧಾರ
ನಟ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ
2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: 67 ಸಾಧಕರ ಪಟ್ಟಿ ಇಲ್ಲಿದೆ