ಉಪಚುನಾವಣೆ ಬಳಿಕ ನಾನು ದೆಹಲಿಗೆ ಹೋಗುತ್ತೇನೆ. ದೆಹಲಿಗೆ ಹೋಗಿ ಬಂದ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡುತ್ತೇನೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.
ಉಪಚುನಾವಣೆ ಬಳಿಕ ಎಲ್ಲವೂ ಬದಲಾವಣೆಯಾಗುವುದು ನಿಶ್ಚಿತ. ಉಪಚುನಾವಣೆಯಲ್ಲಿ ಬಿಜೆಪಿ ಭಾರಿ ಅಂತರದಿಂದ ಗೆಲುವು ಸಾಧಿಸುತ್ತದೆ. ಹೀಗಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ಮುಖಭಂಗವಾಗುತ್ತದೆ ಎಂದು ಹೇಳಿದ್ದಾರೆ.
ನಾನು ಯಾರ ಬಗ್ಗೆಯೂ ಟೀಕೆ ಮಾಡಿಲ್ಲ. ಯಾರ ಬಗ್ಗೆಯೂ ಒಂದೇ ಒಂದು ಶಬ್ದ ಬಳಸಿಲ್ಲ, ಯಾರ ಹೆಸರು ಬಳಸಿಲ್ಲ. ಉಪಚುನಾವಣೆ ಬಳಿಕ ದೆಹಲಿಗೆ ಹೋಗಿ ಬಂದು ನಂತರ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಇನ್ನು ಉಪಚುನಾವಣೆಯಲ್ಲಿ ನಾನು ಪ್ರಚಾರ ಮಾಡಬೇಕು ಎಂಬುದಿಲ್ಲ. ಆದರೇ ಹೆಚ್ ಡಿ ದೇವೇಗೌಡರು, ಸಿದ್ದರಾಮಯ್ಯ, ಹೆಚ್.ಡಿ ಕುಮಾರಸ್ವಾಮಿ ಅವರು ಪ್ರಚಾರಕ್ಕೆ ಹೋಗಿದ್ದಾರೆ. ನಾನು ಸಿಎಂ ಆಗಿ ಹೋಗದಿದ್ದರೇ ತಪ್ಪಾಗುತ್ತದೆ. ಹೀಗಾಗಿ ಪ್ರಚಾರದಲ್ಲಿ ಪಾಲ್ಗೊಂಡಿದ್ದೇನೆ ಎಂದು ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
More Stories
ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು