ಸಾಲು ಸಾಲು ಚುನಾವಣೆ, ಡಿಸೆಂಬರ್ ನಲ್ಲಿ ಅಧಿವೇಶನ ಇರುವ ಕಾರಣ ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಿರ್ಧಾರದಿಂದ ಸಧ್ಯಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಹಿಂದೆ ಸರಿದಿದ್ದಾರೆ.
ಈ ಕುರಿತಂತೆ ಸುಳಿವು ನೀಡಿದ ಬೊಮ್ಮಾಯಿ ಸಧ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಪ್ರಸ್ತಾವನೆ ಇಲ್ಲ. ಡಿಸೆಂಬರ್ ನಲ್ಲಿ ವಿಧಾನ ಪರಿಷತ್ ಚುನಾವಣೆ ಇದೆ. ಅದಿವೇಶನ ಅದೇ ತಿಂಗಳು ನಡೆಯುವುದರಿಂದ ವಿಸ್ತರಣೆ ಮಾತುಗಳನ್ನು ಸದ್ಯಕ್ಕೆ ಮುಂದೂಡಲಾಗಿದೆ ಎಂದು ಸೂಚ್ಯವಾಗಿ ಸಿಎಂ ಹೇಳಿದರು.
ವಿಧಾನ ಪರಿಷತ್ ಚುನಾವಣೆ, ಅಧಿವೇಶನ ಮುಗಿದ ಬಳಿಕ ಜಿಪಂ ತಾಪಂ ಚುನಾವಣೆಗಳು ನಡೆಯಲಿವೆ. ಅಲ್ಲದೇ ಬಿಬಿಎಂಪಿ ಚುನಾವಣೆ ಕೂಡ ನಡೆಸಬೇಕಿದೆ ಎನ್ನುವುದು ಸಂಪುಟ ವಿಸ್ತರಣೆಗೆ ತೊಡಕಾಗಿರುವ ಅಂಶಗಳಾಗಿವೆ ಎಂದು ಹೇಳಲಾಗಿದೆ
ಚುನಾವಣೆಗಳನ್ನು ಮುಂದಿಟ್ಟುಕೊಂಡು ವಿಸ್ತರಣೆಗೆ ಕೈ ಹಾಕಿದರೆ ಅತೃಪ್ತರಿಂದ ಪಕ್ಷಕ್ಕೆ ಸಾಕಷ್ಟು ಹಿನ್ನಡೆಯಾಗಲಿದೆ ಎಂಬ ಅಂಶವನ್ನೂ ಕೂಡ ಗಮನದಲ್ಲಿಟ್ಟುಕೊಳ್ಳಬೇಕಾಗಿರುವುದರಿಂದ ವಿಸ್ತರಣೆ ಮಾಡಲು ಸಾಧ್ಯವಿಲ್ಲ ಎನ್ನಲಾಗಿದೆ.
- ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
- ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
More Stories
ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು