ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಶೀಘ್ರವೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದು ಹೇಳಲಾಗುತ್ತಿದೆ.
ಸಿಎಂ ಬಸವರಾಜ ಬೊಮ್ಮಾಯಿ ಇಂದು ಗುಜರಾತ್ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ, ಡಿ.14ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ. ಅಂದೇ ವರಿಷ್ಠರನ್ನು ಭೇಟಿಯಾಗಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಬಳಿಕ ಸಂಪುಟ ವಿಸ್ತರಣೆ ನಡೆಯಲಿದೆ ಎನ್ನಲಾಗಿದೆ.
ವಿಧಾನಸಭೇ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸಂಪುಟದಿಂದ ಕೈಬಿಡಲಾಗಿದ್ದ ನಾಯಕರನ್ನು ಮತ್ತೆ ಸಂಪುಟಕ್ಕೆ ಸೇರಿಸಲು ನಿರ್ಧರಿಸಲಾಗಿದೆ. ಕಾಂಗ್ರೆಸ್ ನ ಹತ್ತಕ್ಕೂ ಅಧಿಕ ಶಾಸಕರು ಬಿಜೆಪಿ ಸಂಪರ್ಕದಲ್ಲಿ : ಸಚಿವ ಅಶೋಕ್
ಮಾಜಿ ಸಚಿವರಾದ ಕೆ.ಎಸ್.ಈಶ್ವರಪ್ಪ, ರಮೇಶ ಜಾರಕಿಹೊಳಿ ಸೇರಿದಂತೆ ಐವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲು ಸಿದ್ಧತೆ ನಡೆದಿದೆ ಎಂದು ಹೇಳಲಾಗುತ್ತಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು