ಬೆಂಗಳೂರು: ಜನವರಿ 2, 2025 ರಂದು ರಾಜ್ಯ ಸರ್ಕಾರದ ಮಹತ್ವದ ಮೊದಲ ಸಚಿವ ಸಂಪುಟ ಸಭೆ ನಿಗದಿಯಾಗಿದ್ದು, ಈ ಸಂದರ್ಭದಲ್ಲಿ ಹಲವು ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳಲಾಗುವ ಸಾಧ್ಯತೆ ಇದೆ.
ಈ ಕುರಿತು ಸರ್ಕಾರದ ಜಂಟಿ ಕಾರ್ಯದರ್ಶಿ ಆರ್. ಚಂದ್ರಶೇಖರ್ ಅವರು ಅಧಿಸೂಚನೆ ಹೊರಡಿಸಿದ್ದು, ದಿನಾಂಕ 02.01.2025, ಗುರುವಾರ ಬೆಳಿಗ್ಗೆ 11:00 ಗಂಟೆಗೆ ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ 2025ನೇ ಸಾಲಿನ 1ನೇ ಸಭೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಇದನ್ನು ಓದಿ –ಹೊಸ ವರ್ಷದ ಸಂಭ್ರಮ: ಜೋಗ ಜಲಪಾತ ವೀಕ್ಷಣೆಗೆ ನಿರ್ಬಂಧ ಸಡಿಲಿಕೆ
ಸಭೆಯ ಕಾರ್ಯಸೂಚಿಯನ್ನು ಪ್ರತ್ಯೇಕವಾಗಿ ಎಲ್ಲಾ ಸಚಿವರಿಗೆ ಕಳುಹಿಸಲಾಗುವುದು ಎಂದು ಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ. ಈ ಸಭೆಯಲ್ಲಿ ಪ್ರಸ್ತುತ ಸರ್ಕಾರದ ಪ್ರಾಮುಖ್ಯ ಯೋಜನೆಗಳು, ಮಹತ್ವದ ನೀತಿಗಳು, ಹಾಗೂ ಮುಂದಿನ ಕಾರ್ಯಕ್ರಮಗಳ ಕುರಿತು ಚರ್ಚೆ ನಡೆಯುವ ನಿರೀಕ್ಷೆಯಿದೆ.
More Stories
₹450 ಕೋಟಿ ವಂಚನೆ ಹಗರಣ: ಟೀಂ ಇಂಡಿಯಾ ಆಟಗಾರ ಶುಭಮನ್ ಗಿಲ್ಗೆ CID ಸಮನ್ಸ್
ಮನು ಭಾಕರ್, ಡಿ ಗುಕೇಶ್ ಸೇರಿದಂತೆ ನಾಲ್ವರಿಗೆ 2024ರ ಖೇಲ್ ರತ್ನ ಪ್ರಶಸ್ತಿ
2025ರ ಕರ್ನಾಟಕ SSLC ಮಾದರಿ ಪ್ರಶ್ನೆಪತ್ರಿಕೆ ಪ್ರಕಟ