November 16, 2024

Newsnap Kannada

The World at your finger tips!

yediyurappa

ಕೋವಿಡ್ ತಡೆಗೆ ತಾಂತ್ರಿಕ ಸಮಿತಿಯ ಶಿಫಾರಸ್ಸು ತಿರಸ್ಕರಿಸಿದ ಸಚಿವ ಸಂಪುಟ – ಶಾಲಾ ಕಾಲೇಜುಗೆ ರಜೆ ಇಲ್ಲ

Spread the love

ಎರಡನೇ ಹಂತದಲ್ಲಿ ಹೆಚ್ಚುತ್ತಿರುವ ಕೋವಿಡ್ ನಿಯಮಗಳ ಹಿನ್ನೆಲೆಯಲ್ಲಿ ಇಂದು ನಡೆದ ಸಚಿನ ಸಂಪುಟ ಸಭೆಯಲ್ಲಿ ಕಟ್ಟುನಿಟ್ಟಿನ ನಿಯಮ ಮತ್ತು ನಿರ್ಬಂಧಗಳು ಹೊರಹೊಮ್ಮುವ ನಿರೀಕ್ಷೆ ಹುಸಿಯಾಗಿದೆ.

ಈಗಾಗಲೇ ಚಾಲ್ತಿಯಲ್ಲಿರುವ ಕೋವಿಡ್ ನಿಯಂತ್ರಣ ನಿಯಮಗಳನ್ನು ಇನ್ನೂ ಮೂರ್ನಾಲ್ಕು ದಿನಗಳ ಕಾಲ ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

yedi 1

ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಮಾಡಿದ ಶಿಫಾರಸುಗಳನ್ನು ಸದ್ಯಕ್ಕೆ ಸಭೆಯಲ್ಲಿ ಕೈಬಿಡಲಾಗಿದೆ. ನಾಲ್ಕೈದು ದಿನಗಳ ಬಳಿಕ ಪರಿಸ್ಥಿತಿ ಅವಲೋಕಿಸಿ ಮುಂದೆ ಇನ್ನಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳಲು ತೀರ್ಮಾನಿಸಲಾಗಿದೆ.

ಸಚಿವ ಸಂಪುಟ ದ ಪ್ರಮುಖ ನಿರ್ಧಾರ ಗಳು:

  • ರಾಜ್ಯಾದ್ಯಂತ ಯಾವುದೇ ಸಭೆ ಸಮಾರಂಭ ಮಾಡಬೇಕಿದ್ದರೂ ಆಯಾ ಜಿಲ್ಲಾಧಿಕಾರಿಗಳ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ.
  • ಗಡಿ ಜಿಲ್ಲೆಗಳಲ್ಲಿ ಅಗತ್ಯ ಎಚ್ಚರಿಕೆ ಕ್ರಮ ವಹಿಸಬೇಕು.
  • ಜನರು ಮನೆಯಿಂದ ಹೊರಗೆ ಹೋದಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.
  • ಗುಂಪುಗೂಡದ ರೀತಿ ಎಚ್ಚರವಹಿಸ ಬೇಕು.
  • ಶಾಲಾ ಕಾಲೇಜುಗಳಲ್ಲಿ ಕೋವಿಡ್ ನಿಯಮಗಳ ಪಾಲನೆಗೆ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಬೇಕು.
  • ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ನೋಡಿಕೊಳ್ಳುವುದು
  • 2020-21ನೇ ಸಾಲಿಗೆ ರಸಗೊಬ್ಬರ ಕಾಪು ದಾಸ್ತಾನು ಮಾಡಲು ನಿರ್ಧಾರ
  • ರಾಜ್ಯ ಸಹಕಾರ ಮಹಾ ಮಂಡಳಿ ಹಾಗೂ ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತವು 150 ಕೋಟಿ ರುಗಳ ಬ್ಯಾಂಕ್ ಸಾಲ ಪಡೆಯಲು ರಾಜ್ಯ ಸರ್ಕಾರದ ಗ್ಯಾರೆಂಟಿ
  • ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾ ವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆಗೆ ಅವಶ್ಯವಿರುವ ಉಪಕರಣ, ಪೀಠೋಪಕರಣ ಮತ್ತಿತರೆ ಪರಿಕರಗಳನ್ನು ಖರೀದಿಸಲು 24.83 ಕೋಟಿಗಳ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ.
  • ಬಳ್ಳಾರಿಯ ವಿಜಯನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿ ನಿರ್ಮಿಸುತ್ತಿರುವ ಹೊಸ 15 ಸಂಕೀರ್ಣ ಕಟ್ಟಡ ನಿರ್ಮಾಣ ಕಾಮಗಾರಿಗೆ 39.98 ಕೋಟಿ ಪರಿಷ್ಕೃತ ಅಂದಾಜಿಗೆ ಅನುಮೋದನೆ.
  • ರಾಜ್ಯಾದ್ಯಂತ ಸರ್ಕಾರಿ ಮಾಲೀಕತ್ವದಲ್ಲಿರುವ ಘೋಷಿತ ಕೊಳಚೆ ಪ್ರದೇಶಗಳ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸಲು ನಿಗದಿಪಡಿಸಿರುವ ದರ ಪರಿಷ್ಕರಣೆಗೆ ಒಪ್ಪಿಗೆ.
  • ಮೈಸೂರು- ಹುಣಸೂರು ರಸ್ತೆ ಹೊರ ವರ್ತುಲ ರಸ್ತೆ ಜಂಕ್ಷನ್‌ನಲ್ಲಿ ಗ್ರೇಡ್ ಸಪರೇಟರ್ ನಿರ್ಮಾಣ ಕಾಮಗಾರಿಯ 22.81 ಕೋಟಿ ಪರಿಷ್ಕೃತ ಅಂದಾಜು ಪಟ್ಟಿಗೆ ಒಪ್ಪಿಗೆ.

Copyright © All rights reserved Newsnap | Newsever by AF themes.
error: Content is protected !!