ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಮುರುಘಾ ಮಠದ ಶರಣರ ಬಂಧನದ ನಂತರ ಇದೀಗ ಸಾಮಾಜಿಕ ಜಾಲತಾಣದಲ್ಲಿ ಪ್ರಶಸ್ತಿ ವಾಪಸ್ ಅಭಿಯಾನ ಆರಂಭವಾಗಿದೆ.
ಬಸವ ಭೂಷಣ ಪ್ರಶಸ್ತಿ ವಾಪಸ್ ನೀಡುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಪತ್ರ ಬರೆಯಲಾಗಿದೆ.
ಸಾಮಾಜಿಕ ಕಾರ್ಯಕರ್ತ ಎಚ್.ಎಂ.ವೆಂಕಟೇಶ್ ಸಿಎಂಗೆ ಈ ಕುರಿತಂತೆ ಪತ್ರ ಬರೆದಿದ್ದಾರೆ. ಸಿಎಂ ಬೊಮ್ಮಾಯಿ ಮುರುಘಾ ಶ್ರೀಗಳಿಂದ ಬಸವ ಭೂಷಣ ಪ್ರಶಸ್ತಿ ಪಡೆದಿದ್ದರು. ಇದೀಗ ಮುರುಘಾ ಶ್ರೀ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದರಿಂದ ಪ್ರಶಸ್ತಿ ವಾಪಸ್ ನೀಡುವಂತೆ ಪತ್ರದಲ್ಲಿ ತಿಳಿಸಲಾಗಿದೆ.
ಈಗಾಗಲೇ ಪತ್ರಕರ್ತ ಪೊ.ಸಾಯಿನಾಥ್ ಬಸವಶ್ರೀ ಪ್ರಶಸ್ತಿ ವಾಪಸ್ ನೀಡುವುದಾಗಿ ಘೋಷಿಸಿದ್ದಾರೆ. ಸಿಎಂ ಕೂಡ ಪ್ರಶಸ್ತಿ ವಾಪಸ್ ನೀಡಿ, ತನಿಖೆ ಮಾಡುತ್ತಿರುವ ಪೊಲೀಸರಿಗೆ ಸ್ವಾತಂತ್ರ್ಯ ನೀಡಬೇಕು. ಮುರುಘಾ ಶ್ರೀಗಳಿಂದ ತಾವು ಪಡೆದ ಪ್ರಶಸ್ತಿಗಳನ್ನು ಹಿಂದಕ್ಕೆ ನೀಡುವಂತೆ ಸುತ್ತೋಲೆ ಹೊರಡಿಸಿ ಎಂದು ಸಿಎಂ ಗೆ ಬರೆದ ಪತ್ರದಲ್ಲಿ ಒತ್ತಾಯಿಸಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು