ಆಸ್ಪತ್ರೆಯಿಂದಲೇ ಪ್ರಚಾರದ ರೂಟ್ ಮ್ಯಾಪ್ ಸಿದ್ಧ : ಹೆಚ್‌ಡಿಕೆ

Team Newsnap
1 Min Read

ಚುನಾವಣಾ ಪ್ರಚಾರದಲ್ಲಿ ಅತಿಯಾಗಿ ತೊಡಗಿಸಿಕೊಂಡ ಕಾರಣ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆ ಸೇರಿದ್ದರೂ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಅವರು, ಚುನಾವಣೆ ಕಾರ್ಯಗಳಲ್ಲಿ ಹೆಚ್ಚು ಕ್ರಿಯಾಶೀಲರಾಗಿದ್ದಾರೆ.

ಆಸ್ಪತ್ರೆಯಲ್ಲಿದ್ದುಕೊಂಡೇ ಕುಮಾರಸ್ವಾಮಿ ಜೆಡಿಎಸ್‌ ಪ್ರಚಾರದ ರೂಟ್‌ ಮ್ಯಾಪ್‌ ಸಿದ್ಧಪಡಿಸುತ್ತಿದ್ದಾರೆ.

ಅನಾರೋಗ್ಯದ ನಡುವೆಯೂ ಹೆಚ್‌ಡಿಕೆ ಚುನಾವಣಾ ಪ್ರಚಾರಕ್ಕೆ ಸಿದ್ಧತೆ ನಡೆಸಿದ್ದಾರೆ. ಇಬ್ಬರು ‘ಐಪಿಎಸ್ ‘ ಅಧಿಕಾರಿಗಳ ವರ್ಗಾವಣೆ

ವಿಶ್ರಾಂತ ರಹಿತವಾಗಿ ಪ್ರವಾಸ ಮಾಡಿದ್ದ ಹಿನ್ನೆಲೆಯಲ್ಲಿ ಹೆಚ್‌.ಡಿ ಕುಮಾರಸ್ವಾಮಿ ಅವರಿಗೆ ಜ್ವರ ಕಾಣಿಸಿಕೊಂಡ ನಂತರ ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಸಲಹೆ ನೀಡಿದ್ದರು.

ವಿಶ್ರಾಂತಿ ನಂತರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವುದಾಗಿ ಕುಮಾರಸ್ವಾಮಿ ತಿಳಿಸಿ, ಜೆಡಿಎಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಈ ಬಗ್ಗೆ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಮನವಿ ಮಾಡಿದ್ದರು

Share This Article
Leave a comment